ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.
ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಪ್ರವಾಸ ಮಾಡಲಿದ್ದೇನೆ. ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹಣವಿಲ್ಲದೇ ರಸ್ತೆಯ ಸಣ್ಣ ಗುಂಡಿಯನ್ನೂ ಮುಚ್ಚಲು ಆಗುತ್ತಿಲ್ಲ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಭಾರೀ ಅಭಿವೃದ್ಧಿ ಮಾಡುತ್ತಿರುವುದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ರಾಜ್ಯ ಸರ್ಕಾರದ ಬಗ್ಗೆ ಜನರಿಗೆ ತಿಳಿ ಹೇಳಿ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.





