ರಾಜ್ಯ

ಮುಂದಿನ ವಾರದಿಂದ ಮತ್ತೆ ರಾಜ್ಯ ಪ್ರವಾಸ: ಮಾಜಿ ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಮತ್ತೆ ರಾಜ್ಯ ಪ್ರವಾಸ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮುಂದಿನ ವಾರದಿಂದ ರಾಜ್ಯದೆಲ್ಲೆಡೆ ಪ್ರವಾಸ ಮಾಡಲಿದ್ದೇನೆ ಎಂದು ತಿಳಿಸಿದ್ದಾರೆ.

ಈ ಭ್ರಷ್ಟ, ಬೇಜವಾಬ್ದಾರಿ ಕಾಂಗ್ರೆಸ್‌ ಸರ್ಕಾರವನ್ನು ಕಿತ್ತೊಗೆಯಬೇಕೆಂದು ಪ್ರವಾಸ ಮಾಡಲಿದ್ದೇನೆ. ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಹಣವಿಲ್ಲದೇ ರಸ್ತೆಯ ಸಣ್ಣ ಗುಂಡಿಯನ್ನೂ ಮುಚ್ಚಲು ಆಗುತ್ತಿಲ್ಲ. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಭಾರೀ ಅಭಿವೃದ್ಧಿ ಮಾಡುತ್ತಿರುವುದಾಗಿ ಬೊಬ್ಬೆ ಹೊಡೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ರಾಜ್ಯ ಸರ್ಕಾರದ ಬಗ್ಗೆ ಜನರಿಗೆ ತಿಳಿ ಹೇಳಿ ನಾನು ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುತ್ತೇನೆ ಎಂದು ಮಾಹಿತಿ ನೀಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

5 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

9 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

14 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

18 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

23 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

32 mins ago