ರಾಜ್ಯ

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ ಹಿನ್ನೆಲೆಯಲ್ಲಿ ಕಳೆದ ಬಾರಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ದೃಢ ನಿರ್ಧಾರ ಮಾಡಿದ್ದು, ಭಾರೀ ಪ್ರತಿಭಟನೆಗೆ ಮುಂದಾಗಿದೆ.

38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಯನ್ನ ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ನೌಕರರು ಮತ್ತೆ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಫೆಬ್ರವರಿ 20ರಿಂದ ಕೆಎಸ್‍ಆರ್‍ಟಿಸಿಯ 4 ನಿಗಮದ ನೌಕರರು ಪ್ರತಿಭಟನೆಗೆ ಇಳಿಯುವ ಸಾಧ್ಯತೆ ಇದೆ.

ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬರುವ ಸಾವಿರಾರು ಸಾರಿಗೆ ನೌಕರರು ಫ್ರೀಡಂಪಾರ್ಕ್‍ನಲ್ಲಿ ಜಮಾಯಿಸಲಿದ್ದಾರೆ.

ಬಸ್ ಸಂಚಾರ ಸ್ಥಗಿತಗೊಳ್ಳುವ ಬಗ್ಗೆ ಯಾವುದೇ ಆದೇಶ ಹೊರ ಬಂದಿಲ್ಲ. ಹೀಗಾಗಿ ಬಸ್‍ಗಳ ಓಡಾಟ ಎಂದಿನಂತೆ ಇರಲಿದೆ. ಆದರೆ, ನೌಕರರು ಕೆಲಸ ಹಾಜರಾಗದಿದ್ದರೆ, ಬಸ್‍ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ | ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಿ

ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್‌ಆರ್‌ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…

22 mins ago

ಓದುಗರ ಪತ್ರ | ಜೀವಾವಧಿ ಶಿಕ್ಷೆ ಎಂದರೆ …

ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…

32 mins ago

ಓದುಗರ ಪತ್ರ | ಬೇಸಿಗೆಯಲ್ಲಿ ವಿದ್ಯುತ್ ದರ ಏರಿಕೆಯ ಬರೆ

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್‌ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…

38 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ | ಹೆಣ್ಣು ಭ್ರೂಣ ಹಂತಕ ವೈದ್ಯರನ್ನು ಬೇಟೆಯಾಡುವ ವರ್ಷಾ ದೇಶಪಾಂಡೆ

50ಕ್ಕೂ ಹೆಚ್ಚು ಸ್ಟಿಂಗ್‌ ಆಪರೇಷನ್‌ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…

56 mins ago

ರಕ್ತದ ಕ್ಯಾನ್ಸ್‌ರ್‌ಗೆ ಅಸ್ತ್ರ ʼಭಾರತ್‌ ಕ್ಯಾನ್ಸರ್‌ ಆಸ್ಪತ್ರೆʼ

ಮೈಸೂರಿನ ಭಾರತ್‌ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…

1 hour ago

ಬೆಂಗಳೂರಲ್ಲಿ ಭೀಕರ ಘಟನೆ ; ತನ್ನ ಪ್ರೇಮಿಯನ್ನು ಬೆಂಕಿ ಹಚ್ಚಿ ಕೊಂದ ಪ್ರಿಯತಮೆ

ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…

2 hours ago