big shocking for ksrtc transport unions
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ಫೆ. 20 ರಂದು ರಾಜ್ಯದಾದ್ಯಂತ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ ನಿಧನದ ಹಿನ್ನೆಲೆಯಲ್ಲಿ ಕಳೆದ ಬಾರಿ ಬೆಂಗಳೂರು ಚಲೋ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ಬಾರಿ ಮುಷ್ಕರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ದೃಢ ನಿರ್ಧಾರ ಮಾಡಿದ್ದು, ಭಾರೀ ಪ್ರತಿಭಟನೆಗೆ ಮುಂದಾಗಿದೆ.
38 ತಿಂಗಳ ಹಿಂಬಾಕಿ ಹಣ, 2024ರ ಜನವರಿ 1ಕ್ಕೆ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಯನ್ನ ಮುಂದಿಟ್ಟುಕೊಂಡು ಸಾರಿಗೆ ಇಲಾಖೆ ನೌಕರರು ಮತ್ತೆ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಫೆಬ್ರವರಿ 20ರಿಂದ ಕೆಎಸ್‍ಆರ್‍ಟಿಸಿಯ 4 ನಿಗಮದ ನೌಕರರು ಪ್ರತಿಭಟನೆಗೆ ಇಳಿಯುವ ಸಾಧ್ಯತೆ ಇದೆ.
ವೇತನ ಪರಿಷ್ಕರಣೆ ಹಾಗೂ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ, ಬೆಂಗಳೂರು ಚಲೋಗೆ ಕರೆ ನೀಡಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಬರುವ ಸಾವಿರಾರು ಸಾರಿಗೆ ನೌಕರರು ಫ್ರೀಡಂಪಾರ್ಕ್‍ನಲ್ಲಿ ಜಮಾಯಿಸಲಿದ್ದಾರೆ.
ಬಸ್ ಸಂಚಾರ ಸ್ಥಗಿತಗೊಳ್ಳುವ ಬಗ್ಗೆ ಯಾವುದೇ ಆದೇಶ ಹೊರ ಬಂದಿಲ್ಲ. ಹೀಗಾಗಿ ಬಸ್‍ಗಳ ಓಡಾಟ ಎಂದಿನಂತೆ ಇರಲಿದೆ. ಆದರೆ, ನೌಕರರು ಕೆಲಸ ಹಾಜರಾಗದಿದ್ದರೆ, ಬಸ್‍ಗಳ ಓಡಾಟದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…