ಬೆಂಗಳೂರು: ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ಕೋರ್ಟ್‌ನಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ನನ್ನ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಹನುಮಮಾಲೆ ಸಂಕೀರ್ತನಾ ಯಾತ್ರೆ ಸಮಾರಂಭದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಡಾ.ಪ್ರಭಾಕರ್ ಭಟ್ ಮಾತನಾಡಿದ್ದರು.
ಈ ಭಾಷಣದಲ್ಲಿ ಅವರು ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ದಿನಕ್ಕೊಬ್ಬ ಗಂಡ. ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಮೋದಿ ಸರ್ಕಾರ ಎಂದು ಹೇಳಿದ್ದರು. ಈ ಹೇಳಿಕೆಯು ಮಹಿಳೆಯರ ಖಾಸಗಿತನ, ಮಹಿಳೆಯನ್ನು ಲೈಂಗಿಕವಾಗಿ ನಿಂದಿಸುವ, ಮಹಿಳೆಯರ ಮೇಲೆ ಸಾರ್ವಜನಿಕರು ಬಲ ಪ್ರಯೋಗಿಸುವಂತೆ ಪ್ರಚೋದಿಸುವ, ಮಹಿಳೆಗೆ ಲೈಂಗಿಕ ಜೀವ ಬೆದರಿಕೆ ಒಡ್ಡುವ ಅಪರಾಧ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್ ಬಿಗ್ ನಜೀರ್ ಅಹಮ್ಮದ್ ಶ್ರೀರಂಗಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.
ದೂರಿನ ಅನ್ವಯ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಿದ್ದ ಪೊಲೀಸರು ಶ್ರೀರಂಗಪಟ್ಟಣ ಜೆಎಂಎಫ್‌ಸಿ ವಿಚಾರಣಾ ಕೋರ್ಟ್‌ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…