ಕೋಮು ಗೂಂಡಾಗಿರಿ ಕುರಿತ ಹೇಳಿಕೆ : ಸಿಎಂ ಬೊಮ್ಮಾಯಿಗೆ ನೋಟಿಸ್

ಬೆಂಗಳೂರು : ಕೋಮು ಗೂಂಡಾಗಿರಿ ಕುರಿತು ನೀಡಿದರನ್ನೆಲಾದ ಹೇಳಿಕೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್ ಸಂಘಟನೆ ನೋಟಿಸ್ ಜಾರಿಗೊಳಿಸಿದೆ.

ಮತೀಯ ಗೂಂಡಾಗಿರಿ ಕುರಿತು ಕ್ರಿಯೆ ಮತ್ತು ಪ್ರತಿಕ್ರಿಯೆಗಳು ಇದ್ದೇ ಇರುತ್ತವೆ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿಯವರು ಅದನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ವಕೀಲರ ಸಂಘಟನೆ ಆರೋಪಿಸಿದೆ.

ಈ ಹೇಳಿಕೆ ನೀಡಿರುವ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಸ್ವೀಕರಿಸಿದ ಪ್ರಮಾಣ ವಚನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು, ಭಾರತೀಯ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ ಎಂದು ಸಂಘಟನೆ ನೋಟಿಸ್‌ನಲ್ಲಿ ಹೇಳಿದೆ.

ಅಂತರ್ಜಾತಿ ಮತ್ತು ಅಂತರ್ ಧರ್ಮೀಯ ವಿವಾಹವಾದವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಸುಪ್ರೀಂಕೋರ್ಟ್ ಸ್ಪಷ್ಟ ತೀರ್ಪು ನೀಡಿದೆ. ಮುಖ್ಯಮಂತ್ರಿ ಅವರ ಈ ಹೇಳಿಕೆಯು ಸರ್ವೋಚ್ಚ ನ್ಯಾಯಾಲಯದ ತೀರ್ಪುಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಕಾರಣಗಳಿಗೆ ಸಿಎಂ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವಕೀಲರ ಸಂಘಟನೆ ತಿಳಿಸಿದೆ.

× Chat with us