ರಾಮನಗರ: ನಿಮ್ಮ ಅವಧಿಯಲ್ಲಿ ರಾಜ್ಯದ ಅಭಿವೃದ್ದಿಗೆ ಏನು ಮಾಡಿದ್ದೀಯಾ ಮೊದಲು ಹೇಳಪ್ಪ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರ ಅಭಿವೃದ್ದಿ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಟಾಂಗ್ ಕೊಟ್ಟಿದ್ದಾರೆ.
ನಗರದಲ್ಲಿ ಇಂದು ಮಾತನಾಡಿದ ಅವರು, ಅಭಿವೃದ್ದಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷ ಸತ್ತು ಹೋಗಿದೆ ಸರಿ, ನಿನ್ನ ಅವಧಿಯಲ್ಲಿ ಏನು ಮಾಡಿದ್ದೀಯಾ? ಹೇಳಪ್ಪ. ನಾವು ಸಹಕಾರ ಕೊಡ್ತೇವೆ ನೀವು ರಾಜಕೀಯ ಮಾಡ್ತೀಯಾ ಎಂದು ಆರೋಪಿಸಿದರು.
ನಿನಗೆ ರಾಜಕಾರಣವೇ ಮುಖ್ಯ ಹೊರತು ಅಭಿವೃದ್ದಿಯಲ್ಲ. ಒಂದು ದಿನದಲ್ಲಿ ಮೇಕೆದಾಟು ಯೋಜನೆಗೆ ಸಹಿ ಹಾಕಿ ಒಪ್ಪಿಗೆ ಸೂಚಿಸುತ್ತೇನೆ ಎಂದು ಹೇಳಿದೆ. ಆದರೆ, ಯಾಕೆ ಮಾಡಲಿಲ್ಲ. ರಾಜಕೀಯದಲ್ಲಿ ಯಾರು ಶಾಶ್ವತ ಅಲ್ಲ, ಎಲ್ಲರೂ ನೆಲಕಚ್ಚಿದ್ದಾರೆ ಎಂದು ಏಕವಚನದಲ್ಲೇ ಗುಡುಗಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…