ಬಳ್ಳಾರಿ: ವಿಶ್ವ ಪಾರಂಪರಿಕ ತಾಣಗಳಲ್ಲಿ ಒಂದಾಗಿರುವ ಹಂಪಿಯಲ್ಲಿ ರಾಜ್ಯದ ಎರಡನೇ ಅತಿದೊಡ್ಡ ಹಾಗೂ ಕಲ್ಯಾಣ ಕರ್ನಾಟಕದ ಅತಿದೊಡ್ಡ ತಾರಾಲಯ ಹಾಗೂ ವಿಜ್ಞಾನ ಕೇಂದ್ರವನ್ನು ನಿರ್ಮಿಸಲಾಗುವುದು ಎಂದು ಸಚಿವ ಎನ್.ಎಸ್.ಬೋಸರಾಜು ತಿಳಿಸಿದ್ದಾರೆ.
ಈ ಬಗ್ಗೆ ವಿಜಯನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕಮಲಾಪುರದಲ್ಲಿ ಪ್ರಮುಖ ಜಾಗವನ್ನು ವಿಜ್ಞಾನ ಕೇಂದ್ರ ಹಾಗೂ ತಾರಾಲಯ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ. ಪ್ರಮುಖ ರಸ್ತೆಗಳಲ್ಲಿ 10 ಎಕರೆ ಜಾಗ ಮಂಜೂರಾಗಿದ್ದು, ಉತ್ತಮ ವಿನ್ಯಾಸದ ಮೂಲಕ ಜಾಗದ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸ್ಥಳದಲ್ಲೇ ಇದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕದ ಅತಿದೊಡ್ಡ ಹಾಗೂ ರಾಜ್ಯದ ಎರಡನೇ ಅತಿದೊಡ್ಡ ತಾರಾಲಯವನ್ನು ಇಲ್ಲಿ ನಿರ್ಮಿಸಲು ಯೋಜಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಈ ಜಾಗವನ್ನು ನೀಡಿದೆ. ಇಲ್ಲಿ ಕಾಮಗಾರಿಗಳ ಪ್ರಾರಂಭಕ್ಕೆ ಅಗತ್ಯ ತಯಾರಿ ನಡೆಸುವಂತೆ ಸೂಚನೆ ನೀಡಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…