ರಾಜ್ಯ

ನೇಹ ಹತ್ಯೆ ಖಂಡಿಸಿ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

  • ಮುಸ್ಲಿಂ ಸಮುದಾಯದ ಮುಖಂಡರಿಂದ ನಾಳೆ ಅರ್ಧ ದಿನ ವ್ಯಾಪರ ಬಂದ್
  • ಮುಸ್ಲಿಂ ಸಂಸ್ಥೆ ಕಾಲೇಜು ಕೊಠಡಿಗೆ ನೇಹ ಹೆಸರು.

ಬೆಂಗಳೂರು: ಹುಬ್ಬಳ್ಳಿಯ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್‌ ಹತ್ಯೆ ಖಂಡಿಸಿ ರಾಜ್ಯ ಬಿಜೆಪಿ ನಾಳೆ ರಾಜ್ಯಾದ್ಯಂತ ಬೃಹತ್‌ ಪ್ರತಿಭಟನೆಗೆ ಮುಂದಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹುಬ್ಬಳ್ಳಿಯ ನೇಹ ಹೀರೇಮಠ್‌ ಹತ್ಯೆ ಅತ್ಯಂತ ಅಮಾನುಷ ಘಟನೆಯಾಗಿದೆ.

ಚುನಾವಣೆಯ ಗಡಿಬಿಡಿಯಲ್ಲಿ ನಾವು ಹೆಣ್ಣು ಮಕ್ಕಳ ಮೇಲಿನ ಕ್ರೌರ್ಯ, ದೈವ ನಿಂದನೆ ಹಾಗೂ ರಾಷ್ಟ್ರ ಭಕ್ತರ ಮೇಲಿನ ಹಲ್ಲೆ ಪ್ರಕರಣಗಳನ್ನು ನಿರ್ಲಕ್ಷಿಸಿ ಕೂರಲಾಗದು.

ಇದನ್ನು ಪೋಲಿಸರು ಎಲ್ಲಾ ಮಗ್ಗಲುಗಳಿಂದಲೂ ತನಿಖೆ ನಡೆಸಬೇಕಾಗಿರುವುದು ಸಾರ್ವಜನಿಕರ ಆಗ್ರಹವಾಗಿದೆ, ಆದರೆ ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಕೆಲ ಸಚಿವರು ಘಟನೆಯ ಕುರಿತು ಲಘುವಾಗಿ ಪ್ರತಿಕ್ರಿಯಿಸಿರುವುದು ನೋಡಿದರೆ ದುಷ್ಟರಿಗೆ ಹಾಗೂ ಹಿಂದೂ ಧರ್ಮದ ಕಂಟಕರಿಗೆ ಸರ್ಕಾರದ ಕೃಪಾಪೋಷಣೆಯ ಉದಾರತೆ ದೊರೆಯುತ್ತಿರುವುದು ಸ್ಪಷ್ಟವಾಗಿದೆ, ಅಲ್ಪಸಂಖ್ಯಾತರ ಓಲೈಕೆಯೇ ಈ ಸರ್ಕಾರದ ಆದ್ಯತೆಯಾಗಿದೆ ಎಂದು ಆರೋಪಿಸಿದ್ದಾರೆ.

ಭಾರತೀಯ ಜನತಾ ಪಾರ್ಟಿ ಸಿದ್ದಾಂತಕ್ಕಾಗಿ ಜನ್ಮ ತಾಳಿದ ಪಕ್ಷ , ನಮ್ಮ ಆದ್ಯತೆ ಏನಿದ್ದರೂ ಧ್ಯೇಯಕ್ಕೇ ಹೊರತು ಅಧಿಕಾರಕ್ಕಲ್ಲ, ಚುನಾವಣಾ ಕಾರ್ಯವನ್ನು ಬದಿಗಿರಿಸಿ ಏಪ್ರಿಲ್ 22 ರ ಸೋಮವಾರದಂದು ನಮ್ಮ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ರಾಜ್ಯಾದ್ಯಂತ ಬೀದಿಗಿಳಿದು ಹೋರಾಟ ನಡೆಸಲು ಕರೆ ನೀಡಲಾಗಿದೆ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಧಾರವಾಡದ ಅಂಜುಮನ್‌ ಸಂಸ್ಥೆಯ ಕಾಲೇಜು ಕೊಠಡಿಗೆ ನೇಹ ಹೆಸರು : ಧಾರವಾಡದ ಅಂಜುಮನ್ ಸಂಸ್ಥೆಯ ಕಾಲೇಜಿನ ಒಂದು ಕೊಠಡಿಗೆ ನೇಹಾ ಹೆಸರಿಡಲು ಸಂಸ್ಥೆ ನಿರ್ಧರಿಸಿದೆ. ಈ ಬಗ್ಗೆ ಅಂಜುಮನ್‌ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್‌ ತಮಟಗಾರ ಮಾಹಿತಿ ನೀಡಿದ್ದು, ನೇಹಾ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಅವಳ ನೆನಪಿಗಾಗಿ ನಾವು ಅಂಜುಮನ್‌ ಕಾಲೇಜಿನ ಒಂದು ಕೊಠಡಿಗೆ ನೇಹಾ ಹಿರೇಮಠ ಅವರ ಹೆಸರಿಡಲು ತೀರ್ಮಾನಿಸಿದ್ದೇವೆ. ಕೊಠಡಿಯನ್ನ ನೇಹ ತಂದೆ ತಾಯಿಯಿಂದಲೇ ಉದ್ಘಾಟನೆ ಮಾಡಿಸುತ್ತೇವೆ ಎಂದಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ನೀರಿನ ‘ತಾಪ’ತ್ರಯ ಹನೂರು ಮೊದಲು!

ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ  ಚಾಮರಾಜನಗರ: ಬಿಸಿಲ ತಾಪ…

4 mins ago

‘ಇದು ನನ್ನ ಜಮೀನು, ನಾನಿನ್ನೂ ಬದುಕಿದ್ದೇನೆ’

ಮಂಜು ಕೋಟೆ ಕೋಟೆ: ಕೆಲವರು ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಸಲು ಮುಂದಾಗಿದ್ದ ಹಿನ್ನೆಲೆಯಲ್ಲಿ ಚಿಕಾಗೋದಿಂದ ಆಗಮಿಸಿ ದಾಖಲೆ ಸಲ್ಲಿಸಿದ…

11 mins ago

‘ಒಳಚರಂಡಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ’: ಶಾಸಕ ಜಿಟಿಡಿ ಸೂಚನೆ

ಮೈಸೂರು:ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ ಜತೆಗೆ,ರಾಜಕಾಲುವೆಯಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲಾಗದ ಸನ್ನಿವೇಶ ನಿರ್ಮಾಣವಾಗಿದ್ದು,ಇದಕ್ಕೆ ಶಾಶ್ವತ ಪರಿಹಾರ…

17 mins ago

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

9 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

9 hours ago