Mysore
32
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಫೆಬ್ರವರಿ.12ರಂದು ರಾಜ್ಯಾದ್ಯಂತ ಬಿಸಿಯೂಟ ನೌಕರರ ಮುಷ್ಕರ

ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ ಒಂದು ದಿನದ ಬಿಸಿಯೂಟ ನೌಕರರ ಮುಷ್ಕರಕ್ಕೆ ಕರೆ ನೀಡಿದೆ.

ಇದರಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ವಿತರಣೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ನೌಕರರು ಮುಷ್ಕರದಲ್ಲಿ ಪಾಲ್ಗೊಳ್ಳುವುದರಿಂದ ಮಕ್ಕಳ ಪೌಷ್ಟಿಕ ಆಹಾರ ಯೋಜನೆಗೆ ಅಡ್ಡಿಯಾಗಬಾರದು ಎಂದು ಪಿಎಂ ಪೋಷಣ್‌ ಶಕ್ತಿ ನಿರ್ಮಾಣ್‌ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಜಾರಿಯಲ್ಲಿರುವ ಕ್ಷೀರಭಾಗ್ಯ ಯೋಜನೆ, ಬಿಸಿಯೂಟ ಯೋಜನೆ ಮತ್ತು ಪೂರಕ ಪೌಷ್ಟಿಕ ಆಹಾರ ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಅಗತ್ಯ ಪೂರಕ ಕ್ರಮಗಳನ್ನು ಕೈಗೊಳ್ಳಲು ಎಲ್ಲಾ ಜಿಲ್ಲೆಗಳ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

 

Tags:
error: Content is protected !!