ಬೆಂಗಳೂರು: ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯದಲ್ಲಿ 94775 ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ ಸುಮಾರು ಶೇ.10 ರಷ್ಟು ಅನಕ್ಷರಸ್ಥರಿದ್ದಾರೆ ಎಂದು ಹೇಳಿರುವ ಸಚಿವರು ರಾಜ್ಯದಲ್ಲಿ 9357 ಅನಕ್ಷರಸ್ಥ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಿದ್ದು, ಇವರಲ್ಲಿ 7277 ಮಂದಿ ಮಹಿಳೆಯರಾಗಿದ್ದಾರೆ, ಕಳೆದ ವರ್ಷ 2403 ಮಹಿಳೆಯರು ಸೇರಿದಂತೆ 3011 ಮಂದಿಯನ್ನು ಸಾಕ್ಷರರನ್ನಾಗಿಸುವ ಕಾರ್ಯಕ್ರಮ ಆರಂಭವಾಗಿದೆ, ಸೋಮವಾರದಿಂದ ಆರಂಭವಾಗಲಿರುವ ಕಾರ್ಯಕ್ರಮದಲ್ಲಿ 5234 ಮಂದಿ ಮಹಿಳಾ ಅನಕ್ಷರಸ್ಥರು ಹಾಗೂ 1112 ಪುರುಷ ಅಕ್ಷರ ಬಾರದವರು ಅಕ್ಷರ ಕಲಿಯಲಿದ್ದಾರೆ ಎಂದು ತಿಳಿಸಿದ್ದಾರೆ.
ಅನಕ್ಷರಸ್ಥ ಗ್ರಾಮ ಪಂಚಾಯತಿ ಚುನಾಯಿತ ಪ್ರತಿನಿಧಿಗಳಲ್ಲಿ ಓದು, ಬರಹ ಕಲಿಸಿ, ಲೆಕ್ಕಾಚಾರದಲ್ಲಿ ಸ್ವಾವಲಂಬಿಗಳಾಗುವಂತೆ ಮಾಡುವುದು ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿರುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದು ಗ್ರಾಮ ಪಂಚಾಯಿತಿ ಸಭಾ ನೋಟೀಸ್, ನಡಾವಳಿ, ಮಾರ್ಗಸೂಚಿಗಳನ್ನು ಸ್ವತಃ ಓದಿ ಅರ್ಥಮಾಡಿಕೊಳ್ಳುವಂತೆ ಸಜ್ಜುಗೊಳಿಸುವುದು, ಸ್ಥಳೀಯ ಆಡಳಿತದ ನೀತಿ ನಿರೂಪಣಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಸಹಾಯ ಮಾಡುವುದು ಹಾಗೂ ಗ್ರಾಮ ಪಂಚಾಯಿತಿ ಸಭೆಗಳು, ಗ್ರಾಮಸಭೆ/ವಾರ್ಡ್‌ಸಭೆಗಳಲ್ಲಿ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಈ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಆಶಯವಾಗಿರುತ್ತದೆ ಎಂದು ಹೇಳಿದ್ದಾರೆ.
2024ರ ಸೆಪ್ಟೆಂಬರ್ 1ರಿಂದ ಅಕ್ಟೋಬರ್ 20ರವರೆಗೆ ರಾಜ್ಯದ 21 ಜಿಲ್ಲೆಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ, ಪ್ರತಿದಿನ ಎರಡು ಗಂಟೆಗಳಂತೆ 50 ದಿನಗಳಲ್ಲಿ 100 ಗಂಟೆಗಳ ಕಲಿಕೆಯನ್ನು ಪೂರ್ಣಗೊಳಿಸಲಾಗುವುದು, ಕಲಿಯುವವರಿಗೆ ಲೇಖನ ಸಾಮಗ್ರಿ ಹಾಗೂ ಓದುವ ಪುಸ್ತಕಗಳನ್ನು ಒಳಗೊಂಡ ಕಿಟ್ ನೀಡಲಾಗುತ್ತದೆ ಹಾಗೂ ಬೋಧಕರಿಗೆ ಗೌರವಧನ ಹಾಗೂ ಶಿಕ್ಷಣಾರ್ಥಿಗಳಿಗೆ ಗೌರವಧನದೊಂದಿಗೆ ಪ್ರಮಾಣಪತ್ರ ನೀಡಲಾಗುವುದು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…