ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ಖಂಡಿಸಿ ಇಂದು(ಜೂ.17) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಬಿಜೆಪಿ ತೀರ್ಮಾನಿಸಿದೆ.
ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ರಾಜ್ಯ ಕಾಂಗ್ರೆಸ್ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿತ್ತು. ಆದರೆ, ಇದೀಗ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಮಾಡಿ ವಿಪಕ್ಷಗಳ ಕೈಗೆ ಕಾಂಗೆಸ್ ಅಸ್ತ್ರ ಕೊಟ್ಟಿದೆ. ಬಿಜೆಪಿಯ ಬೆಲೆ ಏರಿಕೆ ನೀತಿ ಖಂಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ಗೆ ಇದೀಗ ಬೆಲೆ ಏರಿಕೆಯ ಸಂಕಷ್ಟ ತಂದಿದೆ.
ತೈಲ ದರ ಏರಿಕೆ ಇಳಿಕೆಗೆ ಒತ್ತಾಯಿಸಿ ಇಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ಜೊತೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಇನ್ನು ಮುಂದೆಯೂ ಪ್ರತಿಭಟನೆ ನಡೆಸಲಾಗುವುದು ಎಂದು ವಿಪಕ್ಷ ನಾಯಕ ಆರ್.ಅಶೋಕ ತಿಳಿಸಿದ್ದಾರೆ.