ಬೆಂಗಳೂರು: ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪರಿಣಾಮ ತಗ್ಗಿಸಲು ಕರ್ನಾಟಕ ರಾಜ್ಯ ಕ್ರಿಯಾ ಯೋಜನೆ ರೂಪಿಸಲಾಗಿದ್ದು, ಇದರ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡಮಿ ಆಯೋಜಿಸಿದ್ದ ವಿತರೀತ ಬಿಸಿ ಮತ್ತು ಬೆಂಗಳೂರಿನ ಮೇಲೆ ಅದರ ಪರಿಣಾಮ ಕುರಿತ ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಕ್ರಿಯಾ ಯೋಜನೆಯನ್ನು ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾರಿಗೆ ತರಲು ಪರಿಸರ ಇಲಾಖೆ ವ್ಯಾಪ್ತಿಗೆ ಒಳಪಡುವ ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ ಕ್ರಮ ಕೈಗೊಂಡಿದೆ ಎಂದರು.
ಜಿಲ್ಲಾ ಪಂಚಾಯತ್ ಕಚೇರಿಗಳ ಸಹಯೋಗದೊಂದಿಗೆ ಕೆಎಸ್ಎಪಿಸಿಸಿ ಅನುಷ್ಠಾನ ಮತ್ತು ಅದರ ಪ್ರಗತಿಯ ಕುರಿತು ಜಿಲ್ಲಾ ಅಧಿಕಾರಿಗಳು ಮತ್ತು ಇತರ ಸಂಬಂಧಿತ ಸಂಸ್ಥೆಗಳಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕರ್ನಾಟಕದ ಎಲ್ಲಾ 31 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಹವಾಮಾನ ಚೇತರಿಕೆಗೆ ಸಂಬಂಧಿಸಿದಂತೆ ಉತ್ತಮ ರೂಢಿಗಳ ಮಾಹಿತಿಯನ್ನು ಹಂಚಿಕೊಳ್ಳಲು ಏಪ್ರಿಲ್.2025 ರಲ್ಲಿ ಸಮರ್ಪಿತ ರೇಡಿಯೋ ಕಾರ್ಯಕ್ರಮ ಹವಾಮಾನ ಮಿತ್ರ ಪ್ರಾರಂಭಿಸಲಾಗಿದ್ದು, ಈವರೆಗೆ 24 ಕಾರ್ಯಕ್ರಮಗಳನ್ನು ಆಕಾಶವಾಣಿಯಲ್ಲಿ ಪ್ರಸಾರ ಮಾಡಲಾಗಿದೆ. ಈ ಮೂಲಕ ಜನಜಾಗೃತಿ ಮೂಡಿಸುವ ಪ್ರಯತ್ನಗಳು ನಡೆದಿವೆ ಎಂದು ತಿಳಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…