anjandri development meeting
ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಯಿತು. ಸಭೆಯಲ್ಲಿ ವಯಸ್ಕರೂ ಅಂಜನಾದ್ರಿ ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆಸಲಾಯಿತು.
ಇದನ್ನು ಓದಿ:ಚಾಮುಂಡಿ ಯದುವಂಶದ ಕುಲದೇವಿ : ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್
ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ. ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ, ಹಿರಿಯ ಭಕ್ತಾದಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ, ಸಮುದಾಯ ಭವನ ನಿರ್ಮಾಣ ಹಾಗೂ ಇತರ ಪ್ರವಾಸಿ ಸೌಲಭ್ಯಗಳು ಸೇರಿದಂತೆ ಕ್ಷೇತ್ರದ ಸುತ್ತ ಮುತ್ತ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.
ಸದರಿ ಕ್ಷೇತ್ರಕ್ಕೆ ಹಂತ-1 ಮತ್ತು ಹಂತ-2ರಲ್ಲಿ ರೂ.200.00 ಕೋಟಿಗಳ ಕಾಮಗಾರಿಗಳು ಮಂಜೂರಾಗಿದ್ದು, ಈವರೆಗೆ ಸದರಿ ಕಾಮಗಾರಿಗಳಿಗೆ ರೂ.10.00 ಕೋಟಿಗಳನ್ನು ಇಲಾಖೆಯಿಂದ ಬಿಡುಗಡೆ ಮಾಡಲಾಗಿದ್ದು, ಬಾಕಿ ಅನುದಾನ ಬಿಡುಗಡೆ ಮಾಡಲು ಆರ್ಥಿಕ ಇಲಾಖೆಯಿಂದ ಹೆಚ್ಚುವರಿ ಅನುದಾನ ಒದಗಿಸಬೇಕಿರುತ್ತದೆ.
ಮಂಜೂರಾಗಿರುವ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರಿ ಜಮೀನಿನ ಕೊರತೆ ಇರುವುದರಿಂದ, ಪ್ರಸಾಪಿಸಿರುವ 77.28 ಖಾಸಗಿ ಜಮೀನನ್ನು ಅನುದಾನದ ಕೊರತೆಯಿರುವುದರಿಂದ ಈವರೆಗೂ ಭೂ-ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಾಗಿರುವುದಿಲ್ಲ.
ಇದನ್ನು ಓದಿ:ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ
ಆದ್ದರಿಂದ, ಹೆಚ್ಚುವರಿ ಜಮೀನು ಒಳಗೊಂಡಂತೆ ಒಟ್ಟು 101-30 “ಎ-ಗುಂ ಖಾಸಗಿ ಜಮೀನು ಭೂಸ್ವಾಧೀನಪಡಿಸಿಕೊಳ್ಳಲು ಅಗತ್ಯವಾಗಿರುವ ಅನುದಾನವನ್ನು ಆರ್ಥಿಕ ಇಲಾಖೆಯಿಂದ ಒದಗಿಸಬೇಕಿರುತ್ತದೆ.
ಮಂಜೂರಾಗಿರುವ ಬಹುತೇಕ ಕಾಮಗಾರಿಗಳನ್ನು ಅರಣ್ಯ ಇಲಾಖೆಯ ವ್ಯಾಪ್ತಿಗೆ ಬರುವ ಜಮೀನುಗಳಲ್ಲಿ ಕೈಗೊಳ್ಳಬೇಕಿರುವುದರಿಂದ, ಈ ಎಲ್ಲಾ ಕಾಮಗಾರಿಗಳನ್ನು ಕೈಗೊಳ್ಳಲು ಅರಣ್ಯ ಇಲಾಖೆಯ NOC ನೀಡಬೇಕಿದ್ದು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
2024-25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅಂಜನಾದ್ರಿ ಬೆಟ್ಟವೂ ಒಳಗೊಂಡಂತೆ ರಾಜ್ಯದ 11 ಪ್ರವಾಸಿ ತಾಣಗಳಿಗೆ ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಿದೆ ಎಂದು ಹೇಳಿದರು.
ಸಭೆಯಲ್ಲಿ ಸಚಿವರಾದ ಎಚ್.ಕೆ.ಪಾಟೀಲ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಹಾಗೂ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…