ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದರು.
ವಿಕಾಸಸೌಧದಲ್ಲಿಂದು ಚಿಕ್ಕಮಗಳೂರು ಜಿಲ್ಲೆ ಖಾಂಡ್ಯ ಹೋಬಳಿಯ ಗ್ರಾಮಸ್ಥರ ನಿಯೋಗವು ಕಾಡಾನೆ ಸೆರೆ, ಕಾಡುಕೋಣ ಮತ್ತು ಕಾಡುಹಂದಿಗಳ ಉಪಟಳ ನಿಯಂತ್ರಿಸುವಂತೆ ಕೋರಿ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದ ಅವರು, 2011ರಲ್ಲಿ ಹಳ್ಳಿಗಳನ್ನೂ ಬಫರ್ ವಲಯದಲ್ಲಿ ಸೇರಿಸಲಾಗಿದೆ. ಅದೇ ರೀತಿ ಹಿಂದಿನ ಬಿಜೆಪಿ ಸರ್ಕಾರ ಡೀಮ್ಡ್ ಅರಣ್ಯ ವಿಚಾರದಲ್ಲೂ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸದೆ, ಸಲ್ಲಿಸಿರುವ ಪ್ರಮಾಣ ಪತ್ರದಿಂದ ಗೊಂದಲವಾಗಿದ್ದು, ಈಗ ಆ ಸಮಸ್ಯೆಯನ್ನೂ ಪರಿಹರಿಸಲು ತಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ತಿಳಿಸಿದರು.
2022ರಲ್ಲಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡದೆ ಕುಳಿತಲ್ಲೇ ಮನೆ, ಪಟ್ಟಾ ಜಮೀನು, ಸರ್ಕಾರಿ ಕಚೇರಿ, ಶಾಲೆ, ಆಸ್ಪತ್ರೆ ಎಲ್ಲವನ್ನೂ ಡೀಮ್ಡ್ ಅರಣ್ಯದ ವ್ಯಾಪ್ತಿಗೆ ಸೇರಿಸಿದ್ದಾರೆ. ಈಗ ಎಲ್ಲೆಲ್ಲಿ ಇಂತಹ ಸಮಸ್ಯೆ ಇದೆಯೋ ಅದಕ್ಕೆ ಪರ್ಯಾಯವಾಗಿ ಬೇರೆ ಭೂಮಿ ಗುರುತಿಸಿ, ಡೀಮ್ಡ್ 2ರಲ್ಲಿ ಸಲ್ಲಿಸಿರುವ ಪ್ರಮಾಣಪತ್ರದಲ್ಲಿರುವ ಅರಣ್ಯ ಪ್ರದೇಶದ ಪ್ರಮಾಣ ಉಳಿಸಿಕೊಂಡು ಸುಪ್ರೀಂಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಲಾಗುವುದು ಎಂದರು.
ಶೃಂಗೇರಿ ಶಾಸಕ ರಾಜೇಗೌಡ, ಭದ್ರಾ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಅಂಶುಮಂತಗೌಡ, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…