ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಮೀಸಲಾತಿಯನ್ವಯ ನ್ಯಾಯಬೆಲೆ ಅಂಗಡಿಗಳನ್ನು ವಿಕೇಂದ್ರಿಕರಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 20460 ನ್ಯಾಯಬೆಲೆ ಅಂಗಡಿಗಳಿದ್ದು, ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸೇರಿದವರಿಗೆ 1473 ಅಂಗಡಿಗಳು ಮಾತ್ರ ಇವೆ ಎಂದು ಹೇಳಿದರು.
ಇದನ್ನು ಓದಿ: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ
ಕರ್ನಾಟಕ ಅಗತ್ಯವಸ್ತುಗಳ ಕಾಯ್ದೆಯಡಿ ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶೇ.10 ರಷ್ಟು ಎಸ್‌ಸಿ, ಎಸ್‌ಟಿ ಜನಸಂಖ್ಯೆ ಇರುವ ಕಡೆಗಳಲ್ಲಿ ಆ ವರ್ಗದವರಿಗೆ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ಅಧಿಕಾರ ನೀಡಲಾಗಿದೆ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪಾಲಿಕೆ ಆಯುಕ್ತರು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸದಸ್ಯರಾಗಿರುತ್ತಾರೆ. ಆಹಾರ ಇಲಾಖೆಯ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದರು.
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…