ರಾಜ್ಯ

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಶರಣಗೌಡ ಕಂದಕೂರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸ ಮೀಸಲಾತಿಯನ್ವಯ ನ್ಯಾಯಬೆಲೆ ಅಂಗಡಿಗಳನ್ನು ವಿಕೇಂದ್ರಿಕರಣ ಮಾಡಲಾಗುತ್ತಿದೆ. ರಾಜ್ಯದಲ್ಲಿ ಪ್ರಸ್ತುತ 20460 ನ್ಯಾಯಬೆಲೆ ಅಂಗಡಿಗಳಿದ್ದು, ಎಸ್‌ಸಿ, ಎಸ್‌ಟಿ ಸಮುದಾಯಗಳಿಗೆ ಸೇರಿದವರಿಗೆ 1473 ಅಂಗಡಿಗಳು ಮಾತ್ರ ಇವೆ ಎಂದು ಹೇಳಿದರು.

ಇದನ್ನು ಓದಿ: ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಕರ್ನಾಟಕ ಅಗತ್ಯವಸ್ತುಗಳ ಕಾಯ್ದೆಯಡಿ ಹೊಸ ನ್ಯಾಯಬೆಲೆ ಅಂಗಡಿಗಳ ಮಂಜೂರಾತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಶೇ.10 ರಷ್ಟು ಎಸ್‌ಸಿ, ಎಸ್‌ಟಿ ಜನಸಂಖ್ಯೆ ಇರುವ ಕಡೆಗಳಲ್ಲಿ ಆ ವರ್ಗದವರಿಗೆ ನ್ಯಾಯಬೆಲೆ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಗೆ ಅಧಿಕಾರ ನೀಡಲಾಗಿದೆ. ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಪಾಲಿಕೆ ಆಯುಕ್ತರು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸದಸ್ಯರಾಗಿರುತ್ತಾರೆ. ಆಹಾರ ಇಲಾಖೆಯ ಅಧಿಕಾರಿಗಳು ಸದಸ್ಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಾರೆ ಎಂದು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

8 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

8 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

10 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

12 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

12 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

13 hours ago