ರಾಜ್ಯ

ಪೌರಕಾರ್ಮಿಕರು ಸೇರಿ ಎಲ್ಲಾ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ : ಬೈರತಿ ಸುರೇಶ್

ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ ಕಾರ್ಮಿಕರಿಗೆ ಪಾಲಿಕೆಗಳಿಂದಲೇ ವೇತನವನ್ನು ನೇರವಾಗಿ ಪಾವತಿ ಮಾಡುವ ಬಗ್ಗೆ ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಶುಕ್ರವಾರ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿಯ ವೇದವ್ಯಾಸ ಕಾಮತ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 13 ಮಹಾನಗರ ಪಾಲಿಕೆಗಳಲ್ಲಿನ ಕಾರ್ಮಿಕರಿಗೆ ಪಾಲಿಕೆಗಳೇ ನೇರವಾಗಿ ವೇತನ ಪಾವತಿಸಬೇಕೆಂಬುದು ನಮ್ಮ ಸರ್ಕಾರ ಆಶಯವಾಗಿದೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅಲ್ಲಿಂದ ಒಪ್ಪಿಗೆ ಸಿಕ್ಕರೆ ಎಲ್ಲರಿಗೂ ನೇರವಾಗಿ ವೇತನವನ್ನು ಪಾವತಿಸಲಾಗುತ್ತದೆ ಎಂದು ಭರವಸೆ ನೀಡಿದರು.

ಎಲ್ಲಾ ಮಹಾನಗರಪಾಲಿಕೆಗಳಲ್ಲಿ 30 ಸಾವಿರಕ್ಕೂ ಅಧಿಕ ಕಾರ್ಮಿಕರು ಗುತ್ತಿಗೆ/ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸುವ ಬಗ್ಗೆ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನು ಹಣಕಾಸು ಇಲಾಖೆ ತಿರಸ್ಕರಿಸಿದೆ. ಇಲಾಖೆಗೆ ಆರ್ಥಿಕ ಹೊರೆ ಹೆಚ್ಚಾಗುವುದರಿಂದ ಇವರೆಲ್ಲರನ್ನೂ ಖಾಯಂಗೊಳಿಸಲು ಸಾಧ್ಯವಾಗುವುದಿಲ್ಲ. ಆರ್ಥಿಕ ಒಪ್ಪಿಗೆ ಸೂಚಿಸಿದರೆ ಅದನ್ನು ಜಾರಿಗೆ ತರಲು ಯಾವುದೇ ಅಭ್ಯಂತರವಿಲ್ಲ ಎಂದು ತಿಳಿಸಿದ ಅವರು, ಕಾರ್ಮಿಕರ ಹಿತ ಕಾಯ್ದುಕೊಳ್ಳಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ತಿಳಿಸಿದರು.

ಇದನ್ನೂ ಓದಿ:-ಮೈಸೂರು | ನಾಳೆ ಗಿಚ್ಚಿ ಗಿಲಿಗಿಲಿ ಜೂನಿಯರ‍್ಸ್ ರಿಯಾಲಿಟಿ ಶೋʼನ ಆಡಿಷನ್‌

ತಾರತಮ್ಯವಿಲ್ಲದೇ ಎಲ್ಲಾ ಪಾಲಿಕೆಗಳಿಗೆ ಅನುದಾನ
ಬಿಜೆಪಿಯ ಭರತ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಸುರೇಶ್ ಅವರು, ಮಂಗಳೂರು ಮಹಾನಗರ ಪಾಲಿಕೆಗೆ ಎಸ್ ಎಫ್ ಸಿ ಮುಕ್ತನಿಧಿಯಡಿ 2022-23 ನೇ ಸಾಲಿನಲ್ಲಿ 609.80 ಲಕ್ಷ ರೂಪಾಯಿಗಳು, 2023-24 ನೇ ಸಾಲಿನಲ್ಲಿ 724.60 ಲಕ್ಷ ರೂಪಾಯಿಗಳು 2024-25 ರಲ್ಲಿ 692 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಅದೇ ರೀತಿಯಲ್ಲಿ ಎಸ್ ಎಫ್ ಸಿ ಕುಡಿಯುವ ನೀರು ಯೋಜನೆಯಡಿ ಕ್ರಮವಾಗಿ 9.50 ಲಕ್ಷ, 9.04 ಲಕ್ಷ ಮತ್ತು 10 ಲಕ್ಷ ರೂಪಾಯಿಗಳು ಹಾಗೂ ಎಸ್ ಎಫ್ ಸಿ ವಿಶೇಷ ಅನುದಾನದ ರೂಪದಲ್ಲಿ 193.40 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

15 ನೇ ಹಣಕಾಸು ಆಯೋಗದ ಅನುದಾನದಿಂದ ಮಂಗಳೂರು ಮಹಾನಗರಪಾಲಿಕೆಗೆ ಕಳೆದ ಮೂರು ವರ್ಷಗಳಲ್ಲಿ 4495.87 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡುವ ಮೂಲಕ ಮಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಂಡಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು. 13 ಮಹಾನಗರ ಪಾಲಿಕೆಗಳ ಪೈಕಿ 12 ಮಹಾನಗರಪಾಲಿಕೆಗಳಿಗೆ ಒಟ್ಟು 2400 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ನಮ್ಮ ಸರ್ಕಾರ ಮಂಜೂರು ಮಾಡಿದೆ. ಈ ವಿಚಾರದಲ್ಲಿ ಸರ್ಕಾರ ಯಾವುದೇ ರೀತಿಯಲ್ಲೂ ತಾರತಮ್ಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಕಾಮಗಾರಿಗಳು ಮುಗಿದ ತಕ್ಷಣವೇ ಹಣವನ್ನು ಬಿಡುಗಡೆ ಮಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ವಿಮೆ ಪಾವತಿಗೆ ಕ್ರಮ
ವಾಹನಗಳ ವಿಮೆ ಇಲ್ಲದೇ ಕಸದ ಲಾರಿ ಸೇರಿದಂತೆ ಇನ್ನಿತರ ವಾಹನಗಳನ್ನು ಓಡಿಸಲಾಗುತ್ತಿದೆ. ಇದರಿಂದ ಚಾಲಕರಿಗೆ ತೊಂದರೆ ಆಗಲಿದೆ ಎಂಬ ಸದಸ್ಯರ ಆತಂಕಕ್ಕೆ ಸ್ಪಷ್ಟನೆ ನೀಡಿದ ಸಚಿವರು, ತತ್ ಕ್ಷಣವೇ ವಾಹನಗಳಿಗೆ ವಿಮೆ ಪಾವತಿ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಮಧ್ಯ ಪ್ರಾಚ್ಯ ಬಿಕ್ಕಟ್ಟು | ವಿದೇಶಾಂಗ ನೀತಿ ಬದಲಿಸಲು ಖರ್ಗೆ ಆಗ್ರಹ

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಎಲ್‌ಪಿಜಿ ಸಂಕಷ್ಟವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ವಿದೇಶಾಂಗ…

6 mins ago

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

3 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

4 hours ago