ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಎರಡು ದಿನಗಳ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳೇ, ನೀವು ಎರಡು ದಿನದ ಹಿಂದೆ ಹಾಡಿ ಹೊಗಳಿದ ಶಾಂತಿದೂತರು ಮಂಡ್ಯದ ಮದ್ದೂರಿಯಲ್ಲಿ ಗಣಪತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಸಾಗರದಲ್ಲಿ ಗಣಪತಿಯ ವಿಗ್ರಹಕ್ಕೆ ಉಗುಳುವ ಹೀನ ಕೆಲಸ ಮಾಡಿದ್ದಾರೆ. ಜಾಗತಿಕ ಭಯೋತ್ಪಾದನೆಗೆ ದೊಡ್ಡ ಕೊಡುಗೆ ಕೊಟ್ಟವರು ನೀವು ಹೊಗಳಿದ ಶಾಂತಿದೂತರೇ.
ಭರತಖಂಡದಲ್ಲಿ ಹಿಂದೂಗಳ ಮಾರಣಹೋಮಕ್ಕೆ ಕಾರಣರಾದವರು ನೀವು ಹೊಗಳಿದ ಶಾಂತಿದೂತರೆ. ಭಾರತವನ್ನು ವಿಭಜಿಸುವ ಮೂಲಕ ಅಖಂಡ ಭಾರತವನ್ನು ತುಂಡರಿಸಿದವರ ನೀವು ಹೊಗಳಿದ ಶಾಂತಿದೂತರೆ.
ಈ ನಿಮ್ಮ ಶಾಂತಿದೂತರನ್ನು ನಂಬಿಕೊಂಡಿದ್ದರೆ ಮುಂದೊಂದು ದಿನ ದೇಶದಲ್ಲಿ ಸಂವಿಧಾನದ ಬದಲಿಗೆ ಷರಿಯಾ ಆವರಿಸಿಕೊಂಡಿತು. ರಾಷ್ಟ್ರಧ್ವಜ ಹಾಗೂ ರಾಷ್ಟ್ರಲಾಂಛನವನ್ನು ಗೌರವಿಸಲಾರದವರು ಸಂವಿಧಾನವನ್ನ ಉಳಿಸಿಯಾರೆ? ಎಂದು ಪ್ರಶ್ನೆ ಮಾಡಿದ್ದಾರೆ.
ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…
ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…
ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…