ರಾಜ್ಯ

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ : ಸಿಎಂ ಖಂಡನೆ, ಶಾಂತಿ-ಸೌಹಾರ್ದತೆಗೆ ಮನವಿ

ಬೆಂಗಳೂರು : ಬಾಗಲಕೋಟೆಯ ಹಳೆಯ ನಗರದಲ್ಲಿ ಚತ್ರಪತಿ ಶಿವಾಜಿ ಮಹಾರಾಜ್ ಜಯಂತಿ ಅಂಗವಾಗಿ ನಡೆದ ಭಾವಚಿತ್ರ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಸೇರಿದಂತೆ ಒಬ್ಬ ಸಾರ್ವಜನಿಕರಿಗೆ ಗಾಯವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.

ಮೆರವಣಿಗೆ ಪಂಕಾ ಮಸೀದಿ ಬಳಿ ಹಾದು ಹೋಗುವಾಗ ದುಷ್ಕರ್ಮಿಗಳು ಕಲ್ಲು ಮತ್ತು ಚಪ್ಪಲಿಗಳನ್ನು ತೂರಾಟ ಮಾಡಿದ್ದಾರೆ. ಇದರಿಂದ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಗೋಯೆಲ್ ಅವರಿಗೆ ತಲೆಗೆ ಸಣ್ಣ ಗಾಯವಾಗಿದ್ದು, ಬಟ್ಟೆಯ ಮೇಲೆ ರಕ್ತದ ಕಲೆ ಕಂಡುಬಂದಿದೆ. ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯ ನಂತರ ಹಳೆ ಬಾಗಲಕೋಟೆ, ನವನಗರ, ವಿದ್ಯಾಗಿರಿ ಪ್ರದೇಶಗಳಲ್ಲಿ ಫೆಬ್ರವರಿ 24ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘಟನೆಯನ್ನು ತೀವ್ರವಾಗಿ ಖಂಡಿಸಿ, “ಇದು ಅತ್ಯಂತ ದುರದೃಷ್ಟಕರ ಘಟನೆ. ಕರ್ನಾಟಕದ ಶಕ್ತಿ ಏಕತೆ ಮತ್ತು ಸಹೋದರತ್ವದಲ್ಲಿದೆ. ಜನರು ಅಪಪ್ರಚಾರ ಅಥವಾ ಪ್ರಚೋದನೆಗಳಿಗೆ ಬಲಿಯಾಗಬಾರದು. ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳುವುದು ಎಲ್ಲರ ಹೊಣೆಗಾರಿಕೆ” ಎಂದು ಹೇಳಿದ್ದಾರೆ. ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮುಖ್ಯ ಆರೋಪಿ ಸೇರಿದಂತೆ 8 ಮಂದಿಯನ್ನು ಬಂಧಿಸಿದ್ದಾರೆ. ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಲು ಸಮಗ್ರ ತನಿಖೆ ನಡೆಯುತ್ತಿದೆ. ಈ ಘಟನೆಯು ಸಾಮುದಾಯಿಕ ಸೌಹಾರ್ದಕ್ಕೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ಭದ್ರತಾ ಕ್ರಮಗಳನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಲಾಗಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

5 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

5 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

6 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

7 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

7 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

10 hours ago