ಚಿಕ್ಕಮಗಳೂರು: ಸಾಂಸ್ಕೃತಿಕ ನಗರಿ ಮೈಸೂರಿನ ಉದಯಗಿರಿ ಘಟನೆ ಮಾಸುವ ಮುನ್ನವೇ ಕಾಫಿನಾಡಿನಲ್ಲೂ ಕಲ್ಲು ನಡೆಸಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ್ದು, ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.
ಅನ್ಯಕೋಮಿನ ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ, ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮನೆ ಮಾಲೀಕ ಮಹೇಶ್ ಎಂಬುವವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈಗ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಈ ಘಟನೆ ನಡೆಯುತ್ತಿದ್ದಂತೆ ಸ್ಥಳೀಯರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಅಲ್ಲಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುತ್ತವೆ. ಆದರೂ ಈ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಅನ್ಯಕೋಮಿನ ಯುವಕರು ಅಲ್ಲಲ್ಲಿ ಕೃತ್ಯ ಎಸಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.





