ತುಮಕೂರು: ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಯಾರೇ ತಪ್ಪು ಮಾಡಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮದ್ದೂರಿಗೆ ಬಿಜೆಪಿ ಸೇರಿದಂತೆ ಯಾರೂ ಬೇಕಾದರೂ ಹೋಗಲಿ. ಯಾರು ಬೇಡ ಎಂದು ಹೇಳುತ್ತಾರೆ. ಈ ಸಂದರ್ಭದಲ್ಲಿ ಪ್ರಚೋದನೆ ಮಾಡುವುದು ಸರಿಯಲ್ಲ. ಎಲ್ಲರೂ ಸಹಕಾರ ಮತ್ತು ಶಾಂತಿ ಕಾಪಾಡಬೇಕು ಎಂದು ಮನವಿ ಮಾಡಿದರು.
ಇನ್ನು ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದವರನ್ನು ಯಾವುದೇ ಕಾರಣಕ್ಕೂ ನಾವು ರಕ್ಷಣೆ ಮಾಡಲ್ಲ. ಇಂದು ಜಿಲ್ಲಾ ಉಸ್ತುವಾರಿ ಸಚಿವರು ಶಾಂತಿ ಸಭೆ ಮಾಡುತ್ತಿದ್ದಾರೆ. ಹಿಂದೂಗಳಿರಲಿ, ಮುಸ್ಲಿಮರಿರಲಿ ಯಾರೇ ಆದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…
ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…