ರಾಜ್ಯ

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ ಪರವಾಗಿ ಇದೆಯಾ ಎನ್ನುವ ಬಗ್ಗೆ ಗಮನ ಹರಿಸಿ, ವೃತ್ತಿಧರ್ಮವನ್ನು ಬಹಳ ಮುಖ್ಯವಾಗಿ ಕಾಪಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಮಾಧ್ಯಮ‌ ಅಕಾಡೆಮಿ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಯ್ಕೆಯಾದ ಪತ್ರಕರ್ತರಿಗೆ “2025ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು” ವಿತರಿಸಿ, ಸನ್ಮಾನಿಸಿ ಮಾತನಾಡಿದರು.

ಪತ್ರಕರ್ತರೂ ಆಗಿದ್ದ ಮಹಾತ್ಮಗಾಂಧಿಯವರ ಮಾತಿನಂತೆ ಸರ್ವೋದಯ, ಅಂತ್ಯೋದಯದ ಪರವಾಗಿ ಪತ್ರಕರ್ತರು ಇರಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಇನ್ನೂ ಅಸಮಾನತೆ ಕಾಣುತ್ತಿದ್ದೇವೆ. ಅಂಬೇಡ್ಕರ್ ಅವರೂ ಪತ್ರಕರ್ತರಾಗಿದ್ದರು.ಈ ಅಸಮಾನತೆ ಹೋಗದೆ ಹೋದರೆ ಸ್ವಾತಂತ್ರ್ಯಕ್ಕೆ ಅರ್ಥವಿಲ್ಲ ಎನ್ನುವ ಮಾತನ್ನು ಅಂಬೇಡ್ಕರ್ ಹೇಳಿದ್ದನ್ನು ಸಿಎಂ ಉಲ್ಲೇಖಿಸಿದರು.

ನಾನು ನಿತ್ಯ ದಿನಪತ್ರಿಕೆಗಳನ್ನು ಓದಿದ ಬಳಿಕವೇ ಇತರೆ ಕಾರ್ಯಗಳಿಗೆ ಮುಂದಾಗುತ್ತೇನೆ. ಪತ್ರಿಕೆಗಳು ಇನ್ನೂ ಹೆಚ್ಚಿನ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡಿವೆ. ನಾನು ಟಿವಿ ನೋಡುವುದು ಕಡಿಮೆ ಎಂದರು.

ಈಗ ಊಹಾ ಪತ್ರಿಕೋದ್ಯಮದ ಹಾವಳಿ ಹೆಚ್ಚುತ್ತಿದೆ. ಸತ್ಯ ಬರೆಯುವ ಮತ್ತು ಸಂಶೋಧನೆ ನಡೆಸಿ ಬರೆಯುವ ಪತ್ರಕರ್ತರ ಸಂಖ್ಯೆ ಸುಳ್ಳು ಬರೆಯುವ ಪತ್ರಕರ್ತರ ಸಂಖ್ಯೆಗಿಂತ ಹೆಚ್ಚಾಗಬೇಕು ಎಂದು ಕರೆ ನೀಡಿದರು.

ಒಂದು ಗುಂಪು ಅಥವಾ ಒಂದು ಸಿದ್ಧಾಂತಕ್ಕೆ ಮಾರು ಹೋಗದೆ ವಾಸ್ತವಾಂಶಕ್ಕೆ ಕನ್ನಡಿ ಹಿಡಿಯಬೇಕು. ಹೊಸ ತಂತ್ರಜ್ಞಾನದ ಜೊತೆಗೆ ಮಾಧ್ಯಮ ರಂಗ ಮತ್ತು ಪತ್ರಕರ್ತರೂ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕು. ಹೊಸ ಸವಾಲುಗಳಿಗೆ ತಮ್ಮನ್ನು ತಾವು ಸಜ್ಜುಗೊಳಿಸಿಕೊಂಡು ಹದಗೊಳ್ಳಬೇಕು ಎಂದರು.

ಶಾಸಕ ರಿಜ್ವಾನ್ ಅರ್ಷದ್ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ, ಹಿರಿಯ ಸಾಹಿತಿ ಹಂಪನಾ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೆಷಾ ಖಾನುಂ, ವಾರ್ತಾ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ನಾಟಕ ಅಕಾಡೆಮಿ ಅಧ್ಯಕ್ಷರಾದ ನಾಗರಾಜಮೂರ್ತಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

3 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

3 hours ago