ರಾಜ್ಯ

ಊಹಾ ಪತ್ರಿಕೋದ್ಯಮ ಮೊದಲು ನಿಲ್ಲಿಸಿ: ಸಿಎಂ ಕರೆ

ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿಗಳು ನುಡಿದರು.

ಆಂದೋಲನ ಡೆಸ್ಕ್

Recent Posts

ವಾಷಿಂಗ್ ಮಷಿನ್‌ನಲ್ಲಿ ಅಡಗಿದ್ದ ೧೦ ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ!

ಮಡಿಕೇರಿ: ಮನೆಯ ವಾಷಿಂಗ್ ಮಷಿನ್‌ನೊಳಗೆ ಸುಮಾರು ೧೦ ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಅಡಗಿದ್ದ ಘಟನೆ ಮಡಿಕೇರಿ ತಾಲೂಕಿನ…

38 mins ago

ಅಗತ್ಯ ವಸ್ತುಗಳ ದರ ಏರಿಕೆಗೆ ಹೈಕೋರ್ಟ್‌ ಅಸಮಾಧಾನ

ಬೆಂಗಳೂರು: ‘ಯೋಜನೆ ಉಚಿತ, ಬೆಲೆ ಏರಿಕೆ ಖಚಿತ.’ ಅಗತ್ಯ ವಸ್ತುಗಳ ದರ ಏರಿಕೆ ಬಗ್ಗೆ ಅರ್ಜಿಯೊಂದರ ವಿಚಾರಣೆ ವೇಳೆ ಹೈಕೋರ್ಟ್‌ ಪೀಠ…

46 mins ago

ನ.13ಕ್ಕೆ ಪ್ರಧಾನಿ ಮೋದಿ ಮೈಸೂರು ಭೇಟಿ, ಚಾಮುಂಡಿಬೆಟ್ಟದ ತಪ್ಪಲಿನ ತಾರಾಲಯ ಉದ್ಘಾಟನೆ: ಸಂಸದ ಯದುವೀರ್‌ ಒಡೆಯರ್‌ ಮಾಹಿತಿ

ಮೈಸೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ನೂತನ ತಾರಾಲಯವನ್ನು ಅವರು ಉದ್ಘಾಟಿಸಲಿದ್ದಾರೆ…

1 hour ago

ದರಗಳ ಏರಿಕೆಯಿಂದ ಸಂಕಷ್ಟದಲ್ಲಿ ಜನರು

ಕರ್ನಾಟಕ ಸರ್ಕಾರ ಇತ್ತೀಚೆಗೆ ಎರಡು ದರಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಒಂದು- ಹಾಲಿನ ದರ…

6 hours ago

ನಾಯಿಗೆ ಮೇಯರ್ ಗಿರಿ…!!

ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ, ಚುನಾವಣೆಯೆಂದರೆ, ಎಲೆಕ್ಟ್ರಾನಿಕ್ ಮತಯಂತ್ರದ ಮುಂದೆ ನಿಂತು…

6 hours ago

ಸಿಎಂ ಅಚ್ಯುತರಾಯರು ಮತ್ತು ಮಂತ್ರಿ ಗುಲ್ಗುಲೆಯೂ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಬೆಡ್ ರೂಮಿನ ಎಲೆಕ್ಟ್ರಿಕ್ ಸ್ವಿಚ್ ಬೋರ್ಡಿನ ತ್ರಿಪಿನ್ ಪ್ಲೇಟಿಗೆ ಫಿಕ್ಸ್ ಆಗಿದ್ದ…

6 hours ago