Mysore
16
clear sky

Social Media

ಗುರುವಾರ, 29 ಜನವರಿ 2026
Light
Dark

ಗೃಹಲಕ್ಷ್ಮಿಬಿಟ್ಟು ಬಾಣಂತಿಯರ ಸಾವು ನಿಲ್ಲಿಸಿ: ಆರ್.ಅಶೋಕ

ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು  ಹೆಚ್ಚಗುತ್ತಲೆ ಇದೆ. ನೀವು ನೀಡುವ 2 ಸಾವಿರ ರೂ.  ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಿ, ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್‌. ಆಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಈ ವಿಷಯವಾಗಿ ಸದನದಲ್ಲಿ ಸರ್ಕಾರದ ಕಿವಿ ಹಿಂಡಿದ್ದೆವು ಆದರೂ ಏನು ಪ್ರಯೋಜನವಾಗಲಿಲ್ಲ. ಹೆರಿಗೆಗೆಂದು ಆಸ್ಪತ್ರೆಗೆ ಹೋದ ಗರ್ಭಿಣಿಯರು ಶವವಾಗುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿಗಳ ವಿರುದ್ಧ ದೆಹಲಿಯಲ್ಲಿ ದೂರು ನೀಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.

ಗೃಹಲಕ್ಷ್ಮೀ ಯೋಜನೆಯಿಂದ ಹೊಲಿಗೆ ಯಂತ್ರ ಖರೀದಿಸಿದರು, ಬೋರ್‌ವೆಲ್‌ ಕೊರೆಸಿದರು, ಗ್ರಂಥಾಲಯ ತೆಗೆದರು ಎಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದೀರಾ. ನಮಗೆ ನಿಮ್ಮ ಯೋಜನೆಯ 2 ಸಾವಿರ ರೂ. ಹಣ ಬೇಡ ಬಾಣಂತಿಯರ ಸರಣೀ ಸಾವು ನಿಲ್ಲಿಸಿ. ಹಾಗೆಯೇ ಈಲ್ಲಿವರೆಗೂ ಆಗಿರುವ ಬಾಣಂತಿಯರ ಸರಣಿ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಆಗ್ರಹಿಸಿದರು.

Tags:
error: Content is protected !!