ಬೆಂಗಳೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ಹೆಚ್ಚಗುತ್ತಲೆ ಇದೆ. ನೀವು ನೀಡುವ 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಿ, ಆಸ್ಪತ್ರೆಗಳಲ್ಲಿ ಆಗುತ್ತಿರುವ ಬಾಣಂತಿಯರ ಸಾವುಗಳನ್ನು ತಡೆಯಿರಿ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಆಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಾಣಂತಿಯರ ಸಾವು ಮುಂದುವರೆದಿದೆ. ಈ ವಿಷಯವಾಗಿ ಸದನದಲ್ಲಿ ಸರ್ಕಾರದ ಕಿವಿ ಹಿಂಡಿದ್ದೆವು ಆದರೂ ಏನು ಪ್ರಯೋಜನವಾಗಲಿಲ್ಲ. ಹೆರಿಗೆಗೆಂದು ಆಸ್ಪತ್ರೆಗೆ ಹೋದ ಗರ್ಭಿಣಿಯರು ಶವವಾಗುತ್ತಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಬಾಣಂತಿಯರ ಸಾವಿಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿಗಳ ವಿರುದ್ಧ ದೆಹಲಿಯಲ್ಲಿ ದೂರು ನೀಡುತ್ತೇವೆ ಎಂದು ಸಚಿವರು ಹೇಳಿದ್ದರು. ಆದರೆ ಇನ್ನು ಯಾಕೆ ದೂರು ಕೊಟ್ಟಿಲ್ಲ ಎಂದು ಪ್ರಶ್ನಿಸಿದರು.
ಗೃಹಲಕ್ಷ್ಮೀ ಯೋಜನೆಯಿಂದ ಹೊಲಿಗೆ ಯಂತ್ರ ಖರೀದಿಸಿದರು, ಬೋರ್‌ವೆಲ್ ಕೊರೆಸಿದರು, ಗ್ರಂಥಾಲಯ ತೆಗೆದರು ಎಂದು ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದೀರಾ. ನಮಗೆ ನಿಮ್ಮ ಯೋಜನೆಯ 2 ಸಾವಿರ ರೂ. ಹಣ ಬೇಡ ಬಾಣಂತಿಯರ ಸರಣೀ ಸಾವು ನಿಲ್ಲಿಸಿ. ಹಾಗೆಯೇ ಈಲ್ಲಿವರೆಗೂ ಆಗಿರುವ ಬಾಣಂತಿಯರ ಸರಣಿ ಸಾವಿನ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಆಗ್ರಹಿಸಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…