ಬೆಂಗಳೂರು: ಕನ್ನಡ ಕವಯತ್ರಿ, ಬರಹಗಾರ್ತಿ ಸರಿತಾ ಜ್ಞಾನಾನಂದ ಅವರು ಆರ್.ಆರ್.ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಲೇಖಕಿ, ಅನುವಾದಕಿಯಾಗಿದ್ದ ಸರಿತಾ ಅವರು ವಿವಿಧ ಭಾಷೆಗಳ ಪ್ರಸಿದ್ಧರ ಕಥೆ, ಕಾದಂಬರಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು.
ಇವರು ಹಿಂದಿಯಲ್ಲಿ ರಾಷ್ಟ್ರಭಾಷಾ ಪ್ರವೀಣರಾಗಿರುವುದಲ್ಲದೇ ಕನ್ನಡ, ಇಂಗ್ಲಿಷ್, ತೆಲುಗು, ತಮಿಳು, ಮರಾಠಿ, ಮಲಯಾಳಂ ಹಾಗೂ ಸಂಸ್ಕೃತ ಭಾಷೆಗಳಲ್ಲಿಯೂ ಅವರು ಪ್ರಾವೀಣ್ಯತೆ ಸಾಧಿಸಿದ್ದರು. ಸರಿತಾ ಅವರು ಬೆಂಗಳೂರು ಹಾಗೂ ಕೆಜಿಎಫ್‌ಗಳಲ್ಲಿ ಶಾಲಾ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದರು.
ಸುಮಾರು 300ಕ್ಕೂ ಹೆಚ್ಚು ಸಣ್ಣ ಕಥೆಗಳನ್ನು ಸರಿತಾ ರಚಿಸಿದ್ದು, ನಾಡಿನ ಪ್ರಖ್ಯಾತ ಪತ್ರಕೆಗಳಲೆಲ್ಲಾ ಪ್ರಕಟಗೊಂಡಿವೆ.





