ರಾಜ್ಯ

ನಕಲಿ ವೈದ್ಯರ ಹಾವಳಿಗೆ ಕಟ್ಟುನಿಟ್ಟಿನ ಕ್ರಮ :ಡಾ‌ ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು:  ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸರ್ಕಾರ ಕಟ್ಟುನಿಟ್ಟಿನ ಬಿಗಿಯಾದ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗು ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ಬುಧವಾರ(ಜೂ.12) ಕರ್ನಾಟಕ ಖಾಸಗಿ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ವತಿಯಿಂದ ಡಾ.ಬಿಆರ್‌.ಅಂಬೇಡ್ಕರ್‌ ಭವನದಲ್ಲಿ ಹಮಿಕೊಂಡಿದ್ದ ವಿಶ್ವ ಹೋಮಿಯೋಪತಿ ದಿನಾಚರಣೆ ಮತ್ತು ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಹಾವಳಿ ವ್ಯಾಪಕವಾಗಿ ಕೇಳಿಬರುತ್ತಿದೆ. ಯಾವುದೇ ವೈದ್ಯಕೀಯ ಕೋರ್ಸ್‌ ಮುಗಿಸದೆ ಇರುವವರು ಎಲ್ಲೆಂದರಲ್ಲಿ ಕ್ಲಿನಿಕ್‌ಗಳನ್ನು ತೆರೆದು ಚಿಕಿತ್ಸೆ ನೀಡುತ್ತಾರೆ. ಇದರ ಬಗ್ಗೆ ಸರ್ಕಾರಕ್ಕೆ ಸಾಕಷ್ಟು ದೂರುಗಳು ಬಂದಿವೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರ ಅಮಾಯಕತೆಯನ್ನು ಕೆಲವರು ದುರುಪಯೋಗಪಡಿಸಿಕೊಂಡು ನಕಲಿ ಚಿಕಿತ್ಸೆ ನೀಡುತ್ತಾರೆ. ಇದು ಕಾನೂನು ಬಾಹಿರ ಎಂದು ಗೊತ್ತಿದ್ದರೂ ಕೆಲವರು ಚಿಕಿತ್ಸೆ ನೀಡುತ್ತಿದ್ದಾರೆ. ಇನ್ನು ಮುಂದೆ ಇದಕ್ಕೆ ಶಾಶ್ವತವಾದ ಕಡಿವಾಣ ಬೀಳಲಿದೆ ಎಂದರು. ಕೇವಲ ಸರ್ಕಾರದಿಂದ ಮಾತ್ರ ನಕಲಿ ವೈದ್ಯರ ಹಾವಳಿಯನ್ನು ತಡೆಗಟ್ಟಲು ಸಾಧ್ಯವಿಲ್ಲ. ಇದಕ್ಕೆ ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಸಂಘದ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪಾಟೀಲ್ ಹೇಳಿದರು. ಹೋಮಿಯೋಪತಿ ವೈದ್ಯರು ನಮ್ಮ ಜೊತೆ ಕೈ ಜೋಡಿಸಿದರೆ ಇಂಥ ದಂಧೆಯನ್ನು ತಡೆಗಟ್ಟಬಹುದು. ಕೆಲವು ಸಂದರ್ಭಗಳಲ್ಲಿ ನಕಲಿ ವೈದ್ಯರುಗಳಿಂದ ಅಮಾಯಕರ ಪ್ರಾಣಕ್ಕೂ ಕುತ್ತು ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹೋಮಿಯೋಪತಿ ಹಾಗು ಅಲೋಪತಿ ಬ್ರಿಜ್ ಕೋರ್ಸ್ (bridge course) ಮಾಡಲು ಸರ್ಕಾರ ಅವಕಾಶ ಮಾಡಿಕೊಡಬೇಕೆಂದು ಇದೇ ಸಂದರ್ಭದಲ್ಲಿ ಸಚಿವರಿಗೆ ಸಂಘದ ವತಿಯಿಂದ ಮನವಿ ಮಾಡಲಾಯಿತು.

ಇದಕ್ಕೆ ಸಚಿವರು ಈ ಸಮಸ್ಯೆ ಇತ್ಯರ್ಥವಾಗಬೇಕಾದರೆ ಹೋಮಿಯೋಪತಿ ವೈದ್ಯರ ಸಂಘದವರು ರಾಷ್ಟ್ರೀಯ ವೈದ್ಯಕೀಯ ಆಯೋಗ ಹಾಗು ಕೇಂದ್ರ ಸರ್ಕಾರ ಸರ್ಕಾರಕ್ಕೆ ಮನವಿ ಕೊಡಬೇಕು ಎಂದು ಸಲಹೆ ಮಾಡಿದರು. ಅಂತಿಮವಾಗಿ ಇದನ್ನು ಕೇಂದ್ರವೇ ನಿರ್ಧರಿಸಬೇಕಾಗಿರುವುದರಿಂದ ರಾಜ್ಯ ಸರ್ಕಾರದ ಪಾತ್ರ ಇದರಲ್ಲಿ ಏನೂ ಇಲ್ಲ ಎಂದು ಪಾಟೀಲ್  ಪುನರುಚ್ಚರಿಸಿದರು.

ರಾಜೀವ್‌ ಗಾಂಧಿ ಆರೋಗ್ಯ ವಿವಿಗೆ ಹೋಮಿಯೋಪತಿಯ ಪ್ರತಿನಿಧಿಯೊಬ್ಬರನ್ನು ಸಿಂಡಿಕೇಟ್ ಸದಸ್ಯನಾಗಿ ನೇಮಿಸಬೇಕೆಂದು ಸಂಘದ ಪ್ರತಿನಿಧಿಗಳು ಮನವಿ ಮಾಡಿದರು. ಇದಕ್ಕೂ ಸಕಾರಾತವಾಗಿ ಸ್ಪಂದಿಸಿದ ಶರಣಪ್ರಕಾಶ್‌ ಪಾಟೀಲ್‌ ಅವರು ಈ ಕುರಿತು ವಿಶ್ವವಿದ್ಯಾನಿಲಯದ ಕುಲಪತಿಗಳ ಜೊತೆ ಮಾತುಕತೆ ನಡೆಸುವ ಆಶ್ವಾಸನೆಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್‌, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌, ಹೋಮಿಯೋಪಥಿಕ್‌ ವೈದ್ಯಕೀಯ ಮಹಾ ವಿದ್ಯಾಲಯಗಳ ಆಡಳಿತ ಸಂಘದ ಪ್ರಮುಖರಾದ ವಿನೋದ್‌ ದೊಡ್ಡಣ್ಣನವರ್‌, ಕೆ.ಚಂದ್ರಶೇಖರ್‌ ಮತ್ತಿತರರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾಗೆ ಆರ್ಥಿಕ ಸಂಕಷ್ಟ; 20 ಕೋಟಿ ರೂ ನಷ್ಟ

ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…

45 mins ago

ಆಂದೋಲನ ಫಲಶ್ರುತಿ: ಕೊನೆಗೂ ತೆರವಾಯ್ತು ಬೃಹತ್‌ ಮರದ ಕಾಂಡ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…

55 mins ago

ಜಂಬೂ ಸವಾರಿ ಮಾರ್ಗದಲ್ಲಿ ಸಣ್ಣ ಬದಲಾವಣೆ

ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…

1 hour ago

ಪೈಲ್ವಾನರ ಕಸರತ್ತಿಗೆ ಗರಡಿ ಮನೆಗಳು ಸಜ್ಜು

ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…

1 hour ago

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

11 hours ago