ಬೆಂಗಳೂರು: ಸಕಾರಣವಿಲ್ಲದೆ ಪೊಲೀಸ್ ಸಹಾಯವಾಣಿ 112 ಕ್ಕೆ ಅನಗತ್ಯ ಕರೆಗಳು ಬರುತ್ತಿರುವುದು ಹೆಚ್ಚಾಗಿದೆ. ಅನಗತ್ಯ ಹಾಗೂ ತಮಾಷೆಗಾಗಿ ಕರೆ ಮಾಡಿ ತೊಂದರೆ ಕೊಟ್ಟಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ.
ಸಕಾರಣವಿಲ್ಲದೇ ಕರೆ ಮಾಡಿ ಸಣ್ಣ-ಪುಟ್ಟ ವಿಚಾರಕ್ಕೆ ಹೊಯ್ಸಳ ಸಿಬ್ಬಂದಿಯನ್ನು ಕರೆಸಿಕೊಂಡು ಕಮಾಂಡ್ ಸೆಂಟರ್ ಮತ್ತು ಹೊಯ್ಸಳ ಸಿಬ್ಬಂದಿಯ ಕಾಲಹರಣ ಮಾಡುವಾಗ ನಿಜವಾಗಿಯೂ ಸಮಸ್ಯೆಯಲ್ಲಿ ಇರುವವರಿಗೆ ನೆರವು ಸಿಗದೇ ಅವರು ಅಪಾಯದಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಇಲಾಖೆ ಕಳವಳ ವ್ಯಕ್ತಪಡಿಸಿದೆ.
ನೀವು ಟೈಂಪಾಸ್ ಮಾಡುವ ಸಮಯದಲ್ಲಿ ಒಂದು ಜೀವ ಹೋಗಬಹುದಾದ ಸಂಭವ ಇರುತ್ತದೆ. ಯಾರೋ ಆತ್ಮಹತ್ಯೆಗೆ ಯತ್ನಿಸಿರಬಹುದು, ಅಮಾಯಕರ ಮೇಲೆ ರೌಡಿಗಳು ಹಲ್ಲೆಗೆ ಮುಂದಾಗಿರಬಹುದು. ಸಕಾಲದಲ್ಲಿ ಹೊಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋದರೆ ಅವರ ಜೀವ ಉಳಿಸಬಹುದಾಗಿದೆ. ಹೀಗಾಗಿ ಹುಡುಗಾಟಿಕೆಗೆ 112ಕ್ಕೆ ಕರೆ ಮಾಡುವುದನ್ನು ನಿಲ್ಲಿಸಿ. ಇನ್ನು ಮುಂದೆ ಈ ರೀತಿಯ ಅನಗತ್ಯ ಕರೆಗಳು ಬಂದಲ್ಲಿ ಅಂತಹ ನಂಬರ್ ಅನ್ನು ತಾತ್ಕಾಲಿಕವಾಗಿ 24 ಗಂಟೆ ಬ್ಲಾಕ್ ಮಾಡಲಾಗುತ್ತದೆ. ಪದೇ ಪದೇ ಫ್ರಾಡ್ ಕಾಲ್ ಮಾಡುವವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…