ರಾಜ್ಯ

ಕನ್ನಡಿಗರನ್ನು ಕಡೆಗಣಿಸಿದರೆ ಕಠಿಣ ಕ್ರಮ: ಐಟಿ ಕಂಪನಿಗಳಿಗೆ ಡಿಕೆಶಿ ಎಚ್ಚರಿಕೆ!

ಬೆಂಗಳೂರು: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳ ವಿಚಾರದಲ್ಲಿ ಅನ್ಯಾಯವಾಗುತ್ತಿದೆ ಎಂಬ ಆರೋಪವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಸ್ಥಳೀಯ ಕನ್ನಡಿಗರನ್ನು ಉದ್ಯೋಗಾವಕಾಶಗಳಿಂದ ವಂಚಿಸಲಾಗುತ್ತಿದೆ ಎಂಬ ವಿಷಯ ತಿಳಿದು ನೋವಾಗಿದೆ ಎಂದಿದ್ದಾರೆ.

ಕರ್ನಾಟಕದಲ್ಲಿ ಕನ್ನಡಿಗರಿಗೇ ಅಗ್ರಸ್ಥಾನ. ಯಾವುದೇ ಕಾರಣಕ್ಕೂ ಕನ್ನಡಿಗರ ಹಕ್ಕುಗಳು, ಗೌರವ ಹಾಗೂ ಅವಕಾಶಗಳನ್ನು ಕಡೆಗಣಿಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕನ್ನಡಿಗರನ್ನು ಕಡೆಗಣಿಸುವ ಐಟಿ ಕಂಪನಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಸಿದ್ದಾರೆ.

ವಿಶ್ವವೇ ಬೆಂಗಳೂರನ್ನು ಭಾರತದ ತಂತ್ರಜ್ಞಾನ ರಾಜಧಾನಿಯಾಗಿ ನೋಡುತ್ತಿದೆ. ಕನ್ನಡಿಗರ ಪ್ರತಿಭೆ, ಕೌಶಲ್ಯ ಹಾಗೂ ಸಾಮರ್ಥ್ಯದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ ಎಂದು ಡಿಕೆಶಿ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜನವರಿಯೊಳಗೆ ಜಿ.ಪಂ ಹಾಗೂ ತಾ.ಪಂ ಚುನಾವಣೆ: ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷಿತ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್‌ ಅಂತ್ಯ ಅಥವಾ…

40 mins ago

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ: ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೆಆರ್‌ಎಸ್‌ ಜಲಾಶಯಕ್ಕೆ ಮತ್ತೆ ಒಳಹರಿವು ಹೆಚ್ಚಾಗಿದೆ. ಜಲಾಶಯಕ್ಕೆ 9,457 ಕ್ಯುಸೆಕ್‌…

49 mins ago

ಓದುಗರ ಪತ್ರ: ದಡದಹಳ್ಳಿ -ಬ್ಯಾತಹಳ್ಳಿ ರಸ್ತೆ ದುರಸ್ತಿಪಡಿಸಿ

ಮೈಸೂರು ಜೆಪಿ ನಗರ ರಿಂಗ್ ರಸ್ತೆಯ ರೈಲ್ವೆ ಅಂಡರ್‌ಬ್ರಿಡ್ಜ್ ಬಳಿಯ ಶ್ರೀನಗರ ಬಡಾವಣೆಗೆ ಹೋಗುವ ರಸ್ತೆಯು ರೈಲ್ವೆ ಕ್ರಾಸಿಂಗ್ ದಾಟಿ…

4 hours ago

ಓದುಗರ ಪತ್ರ: ಇ- ಕೆವೈಸಿ: ಮತ್ತಷ್ಟು ಆಧಾರ್ ಕೇಂದ್ರಗಳನ್ನು ಆರಂಭಿಸಿ

ಪಡಿತರ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವವರು ಇ- ಕೆವೈಸಿ ಮಾಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಇದಕ್ಕೆ ಆಧಾರ್…

4 hours ago

ಓದುಗರ ಪತ್ರ: ಕೇಂದ್ರ ಸಚಿವರಿಗೆ ಇದು ಬೇಕಾಗಿತ್ತೇ?

ಇತ್ತೀಚಿನ ದಿನಗಳಲ್ಲಿ ರಾಜ್ಯ ರಾಜಕಾರಣದಲ್ಲಿ ತಲ್ಲಣ ಉಂಟು ಮಾಡಿರುವ ಸ್ಟಿಂಗ್ ಆಪರೇಷನ್ ( ಮಾರುವೇಷದ ಕಾರ್ಯಾಚರಣೆ) ಬಗ್ಗೆ ಕೇಂದ್ರ ಸಚಿವ…

4 hours ago

ಓದುಗರ ಪತ್ರ: ದಸರಾ ಮುಗಿದರೂ ಹೆಚ್ಚುವರಿ ಬಸ್ ಟಿಕೆಟ್ ದರ ವಸೂಲಿ ನಿಂತಿಲ್ಲ!

ಕಾರ್ಯನಿಮಿತ್ತ ಅ.೨೩ರಂದು ಮುಂಜಾನೆ ೮ ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ರಾಜ್ಯ ರಸ್ತೆ ಸಾರಿಗೆ ನಿಗಮದ ತಡೆರಹಿತ ಬಸ್‌ನಲ್ಲಿ ತೆರಳಿದಾಗ ನಿರ್ವಾಹಕ…

5 hours ago