ಬೆಂಗಳೂರು: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರದಲ್ಲಿ ಕಳೆದ ಮೂರು ವರ್ಷಗಳಿಂದ ನೂರಾರು ಎಕರೆ ಸರ್ಕಾರಿ ಭೂಮಿ, ಗೋಮಾಳ ಒತ್ತುವರಿ ಆಗಿದೆ. ಅಧಿಕಾರಿಗಳೇ ಇದರಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದ್ದರಿಂದ ಒತ್ತುವರಿ ಆಗಿರುವ ಜಾಗವನ್ನು ತೆರವು ಮಾಡಿಕೊಳ್ಳಲು ಕ್ರಮ ವಹಿಸುತ್ತೇವೆ ಎಂದರು.
ಇನ್ನು ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರತಿ ತಾಲ್ಲೂಕಿನಲ್ಲೂ ವಾರಕ್ಕೆ ಎರಡು ಬಾರಿ ಕೈಗೊಳ್ಳಲು ಸೂಚಿಸಲಾಗಿದೆ. ಈಗಾಗಲೇ ಈ ಕಾರ್ಯ ಆರಂಭವಾಗಿದ್ದು, ಮತ್ತಷ್ಟು ಶೀಘ್ರಗೊಳಿಸಲಾಗುವುದು ಎಂದರು.
ಇನ್ನು ಇದುವರೆಗೂ ಬೆಂಗಳೂರಿನಲ್ಲಿ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ 272 ದೂರುಗಳು ಬಂದಿವೆ. ಹಾಗಾಗಿ ಈ ಬಗ್ಗೆ ಸೂಕ್ತ ಕ್ರಮ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.