ಬೆಂಗಳೂರು: ಚಾಲಕರು ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿ ಸಾರ್ವಜನಿಕರ ಸಾವು ನೋವಿಗೆ ಕಾರಣವಾದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಚಾಲಕರು ಜವಾಬ್ದಾರಿಯಿಂದ, ಜಾಗರೂಕತೆಯಿಂದ ಚಾಲನೆ ಮಾಡಬೇಕು. ಅತೀ ವೇಗ, ನಿರ್ಲಕ್ಷ್ಯದ ಚಾಲನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಂಸ್ಥೆಯಲ್ಲಿ ಶಿಸ್ತು ಕಾಪಾಡಬೇಕು. ಚಾಲಕರು ಬಸ್ ಅಪಘಾತದಲ್ಲಿ ಯಾವುದೇ ಪ್ರಯಾಣಿಕರ ಸಾವಿಗೆ ಕಾರಣರಾದರೇ ಅವರ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಬೇಕೆಂದು ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದರು.
ಕಠಿಣ ಕ್ರಮದ ಭಯವಿಲ್ಲದೆ ಅಜಾಗರೂಕತೆ ಅಲಕ್ಷ್ಯ ವಹಿಸಿ ಪ್ರಯಾಣಿಕರ ಸಾವು ನೋವಿಗೆ ಕಾರಣರಾಗುವ ಸಿಬ್ಬಂದಿಯನ್ನು ಮನ್ನಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: ತಂಗುದಾಣಗಳ ಎದುರು ನಿಲ್ಲದ ಬಸ್ಗಳು: ಪ್ರಯಾಣಿಕರ ಗೋಳು





