Categories: ರಾಜ್ಯ

ಅಜಾಗರೂಕತೆಯಿಂದ ಚಾಲನೆ ಮಾಡಿದರೆ ಚಾಲಕರ ವಿರುದ್ಧ ಕಠಿಣ ಕ್ರಮ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಚಾಲಕರು ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿ ಸಾರ್ವಜನಿಕರ ಸಾವು ನೋವಿಗೆ ಕಾರಣವಾದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು.

ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಚಾಲಕರು ಜವಾಬ್ದಾರಿಯಿಂದ, ಜಾಗರೂಕತೆಯಿಂದ ಚಾಲನೆ ಮಾಡಬೇಕು. ಅತೀ ವೇಗ, ನಿರ್ಲಕ್ಷ್ಯದ ಚಾಲನೆಯನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಸಂಸ್ಥೆಯಲ್ಲಿ ಶಿಸ್ತು ಕಾಪಾಡಬೇಕು. ಚಾಲಕರು ಬಸ್ ಅಪಘಾತದಲ್ಲಿ ಯಾವುದೇ ಪ್ರಯಾಣಿಕರ ಸಾವಿಗೆ ಕಾರಣರಾದರೇ ಅವರ‌ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ ಜರುಗಿಸಬೇಕೆಂದು ಸಾರಿಗೆ ಸಂಸ್ಥೆ ವ್ಯವಸ್ಥಾಪಕ‌ ನಿರ್ದೇಶಕರಿಗೆ ಆದೇಶಿಸಿದರು.

ಕಠಿಣ ಕ್ರಮದ ಭಯವಿಲ್ಲದೆ ಅಜಾಗರೂಕತೆ ಅಲಕ್ಷ್ಯ ವಹಿಸಿ ಪ್ರಯಾಣಿಕರ ಸಾವು ನೋವಿಗೆ ಕಾರಣರಾಗುವ ಸಿಬ್ಬಂದಿಯನ್ನು ಮನ್ನಿಸುವ ಪ್ರಶ್ನೆಯೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ತಂಗುದಾಣಗಳ ಎದುರು ನಿಲ್ಲದ ಬಸ್ಗಳು: ಪ್ರಯಾಣಿಕರ ಗೋಳು

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

1 hour ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

1 hour ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

1 hour ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

1 hour ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

2 hours ago