ರಾಜ್ಯ

ರಾಜ್ಯದಲ್ಲಿ ಆನ್‌ಲೈನ್‌ ಗೇಮ್‌ಗೆ ಕಡಿವಾಣ ಪಕ್ಕಾ: ವಿಧಾನಸಭೆಯಲ್ಲಿ ಗಂಭೀರ ಚರ್ಚೆ

ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ ಮಾದಕ‌ ವಸ್ತುಗಳ ವ್ಯಸನಕ್ಕಿಂತ ಹೆಚ್ಚು ಹಾನಿಯನ್ನು ಆನ್‍ಲೈನ್ ಗೇಮ್‍ಗಳು ಮಾಡುತ್ತಿವೆ. ಇದರ ನಿಯಂತ್ರಣಕ್ಕಾಗಿ 2021ರಲ್ಲಿ ಪೊಲೀಸ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಕಾಯ್ದೆಯನ್ನು ಅಖಿಲ ಭಾರತ ಗೇಮಿಂಗ್ ಒಕ್ಕೂಟ ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದ್ದಾರೆ. 2022ರಲ್ಲಿ ಈ ತಿದ್ದುಪಡಿ ಕಾಯ್ದೆ ರದ್ದಾಗಿದೆ. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ ಎಂದರು.

ಕಂಪ್ಯೂಟರ್, ಮೊಬೈಲ್ ಆಪ್, ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಬಳಸಿ ಆನ್‍ಲೈನ್ ಗೇಮ್ ಆಡುವುದನ್ನು ಕಾಯ್ದೆ ವ್ಯಾಪ್ತಿಗೆ ತರಲಾಗಿದೆ. ಕಳೆದ ಏ.8ರಂದು ಆನ್‍ಲೈನ್ ಗೇಮ್ ನಡೆಸುವವರ ಸಭೆ ನಡೆಸಿ ನಿಯಂತ್ರಣ ಮಾಡುವ ಬಗ್ಗೆ ಚರ್ಚಿಸಲಾಗಿತ್ತು. ಅವರು ಒಪ್ಪಿದ್ದಾರೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿ ಪ್ರಣಮ್ ಮೊಹಾಂತಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು, ಸೆಪ್ಟೆಂಬರ್‌ನಲ್ಲಿ ಸಮಿತಿ ವರದಿ ಬರಲಿದೆ. ಆನ್‍ಲೈನ್ ಗೇಮ್ ನಿಯಂತ್ರಿಸಲು ಸಮಿತಿ ಮಾಡುವ ಶಿಫಾರಸ್ಸು ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆನ್‍ಲೈನ್ ಗೇಮ್ ನಿಯಂತ್ರಿಸಲು ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷಗಳಲ್ಲಿ ಆನ್‍ಲೈನ್ ಆಟಗಳಿಗೆ ಸಂಬಂಧಿಸಿದಂತೆ 347 ಪ್ರಕರಣಗಳು ದಾಖಲಾಗಿವೆ. 2025ರಲ್ಲಿ ಜುಲೈ ಅಂತ್ಯಕ್ಕೆ 159 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದರು.

ಆಂದೋಲನ ಡೆಸ್ಕ್

Recent Posts

ಮದುವೆ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ಚಾಕು ಇರಿತ ; ವಧು ಮಾಜಿ ಲವರ್‌ನಿಂದ ಕೃತ್ಯ ಶಂಕೆ

ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…

5 mins ago

ಚಿರತೆ ದಾಳಿ : ರೈತನಿಗೆ ಗಾಯ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…

50 mins ago

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

1 hour ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

2 hours ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

6 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

6 hours ago