ಬೆಂಗಳೂರು: ಅತ್ತ ಕೊಲ್ಕತ್ತಾ ವೈದ್ಯಕೀಯ ವಿದ್ಯಾರ್ಥಿಯ ಮೇಲೆ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆ ಭುಗಿಲೆದ್ದಿದೆ. ರಾಜ್ಯದಲ್ಲಿಯೂ ಸಹ ನಿನ್ನೆ(ಆ.17) ಸಾವಿರಾರು ವೈದ್ಯರು, ಯುವತಿಯರು, ಮಕ್ಕಳು ಹಾಗೂ ಯುವಕರು ಸೇರಿದಂತೆ ಕತ್ತಲಲ್ಲಿ ಕ್ಯಾಂಡಲ್ ಹಿಡಿದು ಮಹಿಳೆಯರ ಸುರಕ್ಷತೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತ ಈ ನಡುವೆ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದುಹೋಗಿದ್ದು, ಆಟೋದಲ್ಲಿ ತೆರಳುತ್ತಿದ್ದ ಯುವತಿಯ ಮೇಲೆ ಅತ್ಯಾಚಾರವಾಗಿದೆ.
ನಗರದ ಕೋರಮಂಗಲದ ಪಬ್‌ನಿಂದ ಮಧ್ಯರಾತಿ ಪಾನಮತ್ತರಾಗಿ ಹೊರ ಬಂದಿದ್ದ ಯುವತಿ ತನ್ನ ದ್ವಿಚಕ್ರ ವಾಹನ ಮೂಲಕ ಮನೆಗೆ ತೆರಳುತ್ತಿದ್ದರು. ಈ ವೇಳೆ ಬೈಕ್ ಅಪಘಾತವಾಗಿದೆ. ಬಳಿಕ ಯುವತಿ ಬೈಕ್ ಬಿಟ್ಟು ಆಟೋದಲ್ಲಿ ಮನೆಗೆ ತೆರಳಿದ್ದರು. ಈ ವೇಳೆ ಆಟೋ ಚಾಲಕ, ಯುವತಿಯ ಸ್ಥಿತಿ ಕಂಡು ದುರ್ಬಳಕೆ ಮಾಡಿಕೊಂಡಿದ್ದಾನೆ.
ಆಟೋ ಹತ್ತಿದ ಯುವತಿಯನ್ನು ಹೆಚ್‌ಎಸ್‌ಆರ್ ಲೇಔಟ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಲಾಗಿದೆ. ಈ ಬಗ್ಗೆ ಹೆಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಯುವತಿಯು ಹೆಬ್ಬಗೋಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…