ರಾಜ್ಯ

ಅಕ್ರಮ ಮದ್ಯ ಮಾರಾಟಕ್ಕೆ ವಿದ್ಯಾರ್ಥಿಗಳು ಬಲಿ: ಸದನದಲ್ಲಿ ಉಭಯ ಪಕ್ಷಗಳಿಂದ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ವಿದ್ಯಾರ್ಥಿಗಳು ಬಲಿಯಾಗುತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚಳವಾಗುತ್ತಿವೆ ಎಂಬ ವಿಚಾರ ಇಂದಿನ ಸದನದಲ್ಲಿ ಉಭಯ ಪಕ್ಷಗಳ ಚರ್ಚೆಗೆ ಗ್ರಾಸವಾಗಿದೆ.

ವಿಧಾನಸಭೆಯಲ್ಲಿ ಇಂದು(ಮಾರ್ಚ್‌.4) ಬಜೆಟ್‌ ಅಧಿವೇಶನ ಎರಡನೇ ಕಾಲಿಟ್ಟಿದ್ದು, ಪ್ರಶ್ನೋತ್ತರ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ವಿಚಾರ ಪ್ರತಿಧ್ವನಿಸಿದೆ. ಈ ಕುರಿತು ಕಾಂಗ್ರೆಸ್‌ ಶಾಸಕ ಮಹಾಂತೇಶ್‌ ಕೌಜಲಗಿ ಪ್ರಸ್ತಾಪಿಸಿದ್ದು, ಬೈಲಹೊಂಗಲ ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಹಾಗೂ ಅದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಅನಧಿಕೃತವಾಗಿ ಕ್ಷೇತ್ರದಲ್ಲಿ ಮದ್ಯ ಮಾರಾಟವಾಗುತ್ತಿದ್ದು, ವಿದ್ಯಾರ್ಥಿಗಳು ಮದ್ಯಕ್ಕೆ ಬಲಿಯಾಗುತ್ತಿದ್ದಾರೆ. ನಾನು ಆ ಭಾಗದ ಕ್ಷೇತ್ರಕ್ಕೆ ಹೋದಾಗ ಅಲ್ಲಿನ ತಾಯಂದಿರು ಕೈ ಮನವಿ ಮಾಡಿದ್ದಾರೆ. ಅಲ್ಲದೇ ಅಕ್ರಮ ಮದ್ಯ ಮಾರಾಟವೇ ರಸ್ತೆಯ ಅಪಘಾತಕ್ಕೆ ಕಾರಣವಾಗಿದೆ. ಹೀಗಾಗಿ ನನ್ನ ಕ್ಷೇತ್ರದಲ್ಲಿ ಒಂದೇ ಅಲ್ಲ ಇಡೀ ರಾಜ್ಯದಲ್ಲಿ. ಇದಕ್ಕೆ ಸರ್ಕಾರ ಏನು ಕ್ರಮ ತಗೊಂಡಿದೆ ಎಂದು ಪ್ರಶ್ನಿಸಿದರು.

ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ್‌ ಉತ್ತರ ನೀಡಿ, ಅಕ್ರಮ ಮದ್ಯ ಮಾರಾಟ ತಡೆ ಗಟ್ಟುವ ಸಲುವಾಗಿ ಗ್ರಾಮ ಸಭೆಗಳನ್ನು ಮಾಡುತ್ತಿದ್ದೇವೆ. ಅಲ್ಲದೇ ಅಕ್ರಮ ಮದ್ಯ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಜಿಲ್ಲೆಯ ಡಿಸಿ ಮತ್ತು ಎಸ್‌ಪಿಗಳ ನೇತೃತ್ವದಲ್ಲಿ ಸಮನ್ವಯ ಸಮಿತಿ ರಚನೆ ಮಾಡಲಾಗಿದೆ ಎಂದು ಹೇಳಿದರು.

ಇನ್ನು ಜೆಡಿಎಸ್‌ ಶಾಸಕ ಸುರೇಶ್‌ ಬಾಬು ಅವರು ಸರ್ಕಾರವೇ ಮದ್ಯ ಮಾರಾಟ ಮಾಡಲು ಟಾರ್ಗೆಟ್ ನೀಡುತ್ತಿದೆ. ಅದಕ್ಕಾಗಿ ಹಳ್ಳಿಗಳಲ್ಲಿ ಮದ್ಯ ಮಾರಾಟ ಹೆಚ್ಚಾಗುತ್ತಿದೆ ಎಂದು ಆರೋಪಿಸಿದರು. ಅಲ್ಲದೇ ಬಿಜೆಪಿ ಶಾಸಕ ಸಿದ್ದು ಸವದಿ ಮಾತನಾಡಿ, ಸರ್ಕಾರಕ್ಕೆ ಹೆಣ್ಣು ಮಕ್ಕಳು ಶಾಪ ಹಾಕುತ್ತಿದ್ದಾರೆ, ಇದಕ್ಕೆ ಅಬಕಾರಿ ಅಧಿಕಾರಿಗಳೇ ಬೆಂಬಲ ನೀಡುತ್ತಿದ್ದಾರೆ. ಮೊದಲು ಅವರನ್ನು ಅಮಾನತು ಮಾಡಬೇಕು. ಅಕ್ರಮ ಮದ್ಯ ಮಾರಾಟದಿಂದ ಹಳ್ಳಿಯ ವಾತವರಣವೇ ಹಾಳಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿ, ಹಳ್ಳಿಗಳ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದರೆ, ಹೀಗಾಗಿ ಹೇಗೋ ಎಲ್ಲಾ ಅಂಗಡಿಗಳಿಗೆ ಲೈಸೆನ್ಸ್‌ ನೀಡಿ. ಆದ್ಯಾಗೂ ಹೇಗೋ ಸರ್ಕಾರಕ್ಕೆ ಆದಾಯ ಜಾಸ್ತಿಯಾಗುತ್ತದೆ. ಇನ್ನು ನಮ್ಮ ಕ್ಷೇತ್ರದಲ್ಲಿ ಎಸ್‌ಸಿ ಕಾಲೋನಿಯಲ್ಲಿ 35ವರ್ಷದ ಪುರುಷರು ಬಲಿಯಾಗುತ್ತಿದ್ದಾರೆ.

ಈ ಬಗ್ಗೆ ಕಾಂಗ್ರೆಸ್‌ ಶಾಸಕ ನಾರಾಯಣಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ, ಯಾಕೆ ಮದ್ಯವನ್ನು ಕುಡಿಯೋದು ಕೇವಲ ಎಸ್‌ಸಿ ಮತ್ತು ಎಸ್‌ಟಿಗಳು ಯುವಕರು ಮಾತ್ರನಾ? ಯಾಕೆ ಬೇರೆಯವರು ಕುಡಿಯಲ್ಲವಾ? ನೀವು ಕುಡಿಯಲ್ವಾ ಎಂದು ಪ್ರಶ್ನಿಸಿದ್ದಾರೆ. ಬಳಿಕ ಈ ವಿಚಾರಕ್ಕೆ ಮಧ್ಯ ಪ್ರವೇಶಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಗವರ್ನರ್ ಭಾಷಣದ ಮೇಲೆ ಇದರ ಬಗ್ಗೆ ಚರ್ಚೆ ಆಗಲಿ.‌ ಆರಗ ಜ್ಞಾನೇಂದ್ರ ಗೃಹ ಸಚಿವರು ಆಗಿದ್ದವರು ಅಲ್ಲವಾ? ಅವರ ಕಾಲದಲ್ಲಿ ಎಷ್ಟು ಅಕ್ರಮ ಮದ್ಯ ಮಾರಾಟ ಅಂಗಡಿಗಳನ್ನು ಮುಚ್ಚಿಸಿದ್ದಾರೆ ಎಂದು ಹೇಳಲಿ ಎಂದು ತಿರುಗೇಟು ನೀಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

9 hours ago

ನಾಳೆಯೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ: ಇಂಡಿಗೋ ಏರ್‌ಲೈನ್ಸ್‌ಗೆ ಗಡುವು ನೀಡಿದ ಕೇಂದ್ರ ಸರ್ಕಾರ

ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…

10 hours ago

ಡಿ.ಕೆ.ಶಿವಕುಮಾರ್‌ ಸಂಪುಟದಲ್ಲಿ ನನಗೆ ಸಚಿವ ಸ್ಥಾನ ಬೇಡ: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…

10 hours ago

ನನ್ನನ್ನು ಹೆದರಿಸ್ತೀನಿ ಅಂದ್ರೆ ಅದು ಸಾಧ್ಯವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಹಾಸನ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್‌ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

11 hours ago

ಹೇಮಾವತಿ ಜಲಾಶಯದ ಬಳಿ ಉದ್ಯಾನವನ ನಿರ್ಮಿಸಲು ಸಿಎಂ ಸಿದ್ದರಾಮಯ್ಯ ಭರವಸೆ

ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…

11 hours ago

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

12 hours ago