Categories: ರಾಜ್ಯ

ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ ವಿದ್ಯಾರ್ಥಿಗಳು ಸುರಕ್ಷಿತ ; ನಾಳೆ ಬೆಂಗಳೂರಿಗೆ ವಾಪಸ್‌

ಹೊಸದಿಲ್ಲಿ : ಶ್ರೀನಗರದಿಂದ ಶೇರ್ -ಇ-ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ಜನ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ವಾಪಸ್ ಕರೆತರಲಾಗಿದೆ.

ಪಾಕಿಸ್ತಾನದ ದಾಳಿ ನಡುವೆ ಉದ್ರಿಕ್ತ ಪರಿಸ್ಥಿತಿಯಲ್ಲಿ ಸಿಲುಕಿಕೊಂಡಿದ್ದ ವಿದ್ಯಾರ್ಥಿಗಳನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ನಿರ್ದೇಶನದ ಮೇರೆಗೆ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಜಮ್ಮುವಿನಿಂದ ರಾಜ್ಯದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆ ತರುವಲ್ಲಿ ಯಶಸ್ವಿ ಆಗಿದ್ದಾರೆ.

ಪಾಕಿಸ್ತಾನವು ಭಾರತದ ಮೇಲೆ ಅಪ್ರಚೋದಿತ ದಾಳಿ ನಡೆಸುತ್ತಿದ್ದು, ಅದಕ್ಕೆ ಪ್ರತ್ಯುತ್ತರ ನೀಡಲಾಗುತ್ತಿದೆ. ಅಲ್ಲದೆ, ಕಣಿವೆ ರಾಜ್ಯದಲ್ಲಿನ ಎಲ್ಲರ ಜೀವ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ವಿದ್ಯಾರ್ಥಿಗಳ ತೆರವಿಗೆ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗಿದೆ. ಈ ಕಾರ್ಯಾಚರಣೆಗೆ ನೆರವಾದ ಎಲ್ಲವರಿಗೂ ಧನ್ಯವಾದ ಸಲ್ಲಿಸುತ್ತೇನೆ ಎಂದು ಎಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಈಗಾಗಲೇ ಹೊಸದಿಲ್ಲಿ ತಲುಪಿದ್ದು, ಅವರನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕಳಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮದ ವಿದ್ಯಾರ್ಥಿ ಹರ್ಷಿತ್ ಅವರ ಪೋಷಕರು ಜಮ್ಮುವಿನಲ್ಲಿ ಸಿಲುಕಿರುವ ತಮ್ಮ ಪುತ್ರನನ್ನು ರಕ್ಷಣೆ ಮಾಡಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು. ಕೂಡಲೇ ಈ ವಿಷಯವನ್ನು ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಗಮನಕ್ಕೆ ತಂದು ವಿದ್ಯಾರ್ಥಿಗಳ ಸುರಕ್ಷಿತ ಸ್ಥಳಾಂತರಕ್ಕೆ ಮನವಿ ಮಾಡಿದ್ದರು.

ಶನಿವಾರ ಶ್ರೀನಗರದಿಂದ ಭದ್ರತೆಯ ನಡುವೆ ಬಸ್ ನಲ್ಲಿ ಜಮ್ಮುವಿಗೆ ಪ್ರಯಾಣಿಸಿದ್ದ ವಿದ್ಯಾರ್ಥಿಗಳು ಭಾನುವಾರ ಮಧ್ಯಾಹ್ನದ ಹೊತ್ತಿಗೆ ರೈಲಿನಲ್ಲಿ ದೆಹಲಿ ತಲುಪಿದರು. ವಿದ್ಯಾರ್ಥಿಗಳ ಸ್ಥಳಾಂತರ ಮತ್ತು ಪ್ರಯಾಣದ ಎಲ್ಲಾ ಪ್ರಕ್ರಿಯೆಗಳನ್ನು ಕೇಂದ್ರ ಸಚಿವರು ಖುದ್ದು ಉಸ್ತುವಾರಿ ವಹಿಸಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದರು.

ವಿದ್ಯಾರ್ಥಿಗಳು ಹೊಸದಿಲ್ಲಿಗೆ ತಲುಪಿದ ನಂತರ ಅವರ ಉಸ್ತುವಾರಿಯನ್ನು ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಅಧಿಕಾರಿಗಳೇ ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದಾರೆ. ವಿದ್ಯಾರ್ಥಿಗಳು ಸುರಕ್ಷಿತವಾಗಿ ಅವರ ಮನೆಗಳನ್ನು ತಲುಪುವವರೆಗೂ ನಾವು ಎಚ್ಚರಿಕೆ ವಹಿಸುತ್ತೇವೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

“ಇಡೀ ದೇಶವು ಸವಾಲಿನ ಪರಿಸ್ಥಿತಿಯಲ್ಲಿ ಇರುವಾಗ ಪ್ರಧಾನಿ ನರೇಂದ್ರ ಮೋದಿಯವರ ಸ್ಪಷ್ಟ ಮಾರ್ಗದರ್ಶನದಿಂದ ಮಾತ್ರ ಇದೆಲ್ಲಾ ಸಾಧ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರದಿಂದ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲು ಇಡೀ ಕೇಂದ್ರ ಸರ್ಕಾರದ ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಮುಖ್ಯವಾಗಿ ಭದ್ರತಾ ಸಂಸ್ಥೆಗಳು, ರೈಲ್ವೆ ಸಿಬ್ಬಂದಿ ಮತ್ತು ಸಚಿವಾಲಯದ ಅಧಿಕಾರಿಗಳನ್ನು ನಾನು ಶ್ಲಾಘಿಸುತ್ತೇನೆ. ನಮ್ಮ ಜನರ, ವಿಶೇಷವಾಗಿ ದೂರದ ಪ್ರದೇಶಗಳ ವಿದ್ಯಾರ್ಥಿಗಳ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ” ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಸುರಕ್ಷಿತ ವಾಪಸ್, ವಿದ್ಯಾರ್ಥಿಗಳ ಸಂತಸ

ಶ್ರೀನಗರದಿಂದ ದೆಹಲಿಗೆ ಸುರಕ್ಷಿತವಾಗಿ ವಾಪಸ್ ಬಂದ ಬಗ್ಗೆ ಎಲ್ಲಾ ಹದಿಮೂರು ವಿದ್ಯಾರ್ಥಿಗಳು ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

ನನ್ನದು ಚನ್ನಪಟ್ಟಣ ತಾಲ್ಲೂಕಿನ ತಗಚಗೆರೆ ಗ್ರಾಮ. ನಾವು ಶ್ರೀನಗರದಲ್ಲಿದ್ದ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚಾದಾಗ ತೀವ್ರ ಅನಿಶ್ಚಿತ ಮತ್ತು ಆತಂಕಕ್ಕೊಳಗಾಗಿದ್ದೆವು. ಆದರೆ ಭಾರತ ಸರ್ಕಾರದ ತ್ವರಿತ ನೆರವಿನಿಂದ ನಾವು ಅಪಾಯದಿಂದ ಪಾರಾದೆವು. ಪ್ರಧಾನಿ ಮೋದಿಯವರ ಅವರ ಸ್ಪಷ್ಟ ಆದೇಶಗಳು ನಾವು ಸುರಕ್ಷಿತವಾಗಿ ವಾಪಸ್ ಆಗಿದ್ದೇವೆ. ನಮ್ಮನ್ನು ಯೋಗಕ್ಷೇಮ, ಸುರಕ್ಷತೆಯ ಬಗ್ಗೆ ನಿರಂತರವಾಗಿ ನಿಗಾ ವಹಿಸಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ನಮ್ಮ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ. ನಿಖಿಲ್ ಕುಮಾರಸ್ವಾಮಿ ಅವರು ಕೂಡ ನಮ್ಮ ಸುರಕ್ಷಿತ ಪ್ರಯಾಣವನ್ನು ನಿಕಟವಾಗಿ ಗಮನಿಸುತ್ತಿದ್ದರು ಮತ್ತು ಅದು ನಮಗೆಲ್ಲರಿಗೂ ಬಹಳಷ್ಟು ಅನುಕೂಲವಾಯಿತು.
-ಹರ್ಷಿತ್, ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ

ಕಷ್ಟದ ಸಮಯದಲ್ಲಿ ನಮ್ಮೊಂದಿಗೆ ನಿಂತಿದ್ದಕ್ಕಾಗಿ ನಮ್ಮ ಪ್ರಧಾನಮಂತ್ರಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಅವರು ತುಂಬಾ ಗಂಭೀರವಾಗಿ ಪರಿಗಣಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ವೈಯಕ್ತಿಕ ಕಾಳಜಿ, ನೆರವು ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ದೊರೆತ ಸಹಾಯದಿಂದ ನಾವು ಸುರಕ್ಷಿತವಾಗಿ ನಮ್ಮ ನಮ್ಮ ಮನೆಗಳಿಗೆ ತಲುಪುತ್ತಿದ್ದೇವೆ. -ಭಾಗ್ಯಶ್ರೀ ಪ್ರಸಾದ್, ಶೇರ್ – ಇ -ಕಾಶ್ಮೀರ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ ವಿದ್ಯಾರ್ಥಿ

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

4 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

5 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

6 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

6 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

6 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

6 hours ago