ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಸಹಚರರ ವಿರುದ್ಧ 3,991 ಚಾರ್ಜ್ ಶೀಟ್ ಸಲ್ಲಿಸಲಾಗಿದೆ, ಇದರಲ್ಲಿ ಕೊಲೆಯ ಸಂಪೂರ್ಣ ವಿವರ ಒಳಗೊಂಡಿದೆ.
ನಟ ದರ್ಶನ್ ಈ ಪ್ರಕರಣದಲ್ಲಿ ಎ2 ಆರೋಪಿ ಆಗಿದ್ದು, ಅವರ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. ಚಾರ್ಜ್ ಶೀಟ್ ನಲ್ಲಿ, ದರ್ಶನ್ ಕಿಡ್ನಾಪ್, ಹಲ್ಲೆ, ಮತ್ತು ಕೊಲೆ ನಂತರ ಹಣ ನೀಡಿ ಪ್ರಕರಣವನ್ನು ಮುಚ್ಚಿಸುವ ಪ್ರಯತ್ನದಲ್ಲಿ ಭಾಗಿಯಾಗಿದ್ದಾರೆ ಎಂಬ ಮತ್ತಿತರ ವಿವರಗಳಿವೆ.
ಕೊಲೆ ನಡೆದ ಸ್ಥಳದಲ್ಲಿ ದರ್ಶನ್ ಹಾಜರಿದ್ದರು ಮತ್ತು ಸ್ಥಳದಿಂದ ಪರಾರಿಯಾದ ದೃಶ್ಯವು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಅವರ ಬಟ್ಟೆ ಮತ್ತು ಶೂನಲ್ಲಿ ರೇಣುಕಾ ಸ್ವಾಮಿ ರಕ್ತವು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಕೂಡ ದೊರೆತಿವೆ. ಈ ಮಾಹಿತಿಯು ಕೋರ್ಟ್ ವಿಚಾರಣೆಯಲ್ಲಿ ಬಹಳ ಮುಖ್ಯವಾಗಿದೆ. ದರ್ಶನ್ ಕೊಲೆ ಮತ್ತು ಹಲ್ಲೆ ಪ್ರಕರಣದಲ್ಲಿ ಭಾಗವಹಿಸಿದ್ದ ಕುರಿತು ಚಾರ್ಜ್ ಶೀಟ್ ನಲ್ಲಿ ದೃಢಪಡಿಸಲಾಗಿದೆ.
ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…
ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…
ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…
ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…
ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…
ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…