ರಾಜ್ಯ

ರಾಜ್ಯದಲ್ಲಿ ಇದ್ದಕ್ಕಿದ್ದಂತೆ ಸುರಿದ ಮಳೆ: ಅಪಾರ ಪ್ರಮಾಣದ ಬೆಳೆ ಹಾನಿ

ಬೆಂಗಳೂರು: ರಾಜ್ಯದಲ್ಲಿ ಇದಕ್ಕಿದ್ದಂತೆ ಆಲಿಕಲ್ಲು ಸಹಿತ ವ್ಯಾಪಕ ಮಳೆ ದಾಖಲಾಗಿದ್ದರಿಂದ ಮತ್ತೆ ಅಪಾರ ಪ್ರಮಾಣದ ಬೆಳೆ ಹಾನಿ ಉಂಟಾಗಿದೆ. ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ಒದಗಿಸುವಂತೆ ಆಗ್ರಹ ಕೇಳಿ ಬಂದಿದೆ. ಈ ಭಾರಿ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂದು ರೈತರು ಕಾತುರದಿಂದ ಕಾಯುತ್ತಿದ್ದಾರೆ.

ಎರಡು ದಿನದ ಹಿಂದೆ ಆನಿಕಲ್ಲು ಮಳೆಯಾಗಿತ್ತು. ಜೊತೆಗೆ ಈ ಆಲಿಕಲ್ಲು ಮಳೆಯಿಂದಾಗಿ ರೈತರಿಗೆ ಸಾಕಷ್ಟು ನಷ್ಟ ಎದುರಾಗಿತ್ತು. ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ ಇದ್ದು, ರಾಜ್ಯದ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

18 ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದ್ದು, ರಾಯಚೂರು, ಕೊಪ್ಪ, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಬೆಂಗಳೂರು ದಕ್ಷಿಣ, ಕೋಲಾರ, ಬೆಂಗಳೂರು ಗ್ರಾಮಾಂತರ, ಮತ್ತು ಬೆಂಗಳೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಕೆಲ ಭಾಗಗಳಲ್ಲಿ ಆಲಿಕಲ್ಲು ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಮಳೆ ಜೊತೆಗೆ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಸಾಮಾನ್ಯ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಧಾರವಾಡದ ಕಲಘಟಗಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಿಮಪಾತದ ಬಿದ್ದಂತಹ ಅನುಭವವಾಗಿತ್ತು. ಜಿಲ್ಲೆ ವ್ಯಾಪ್ತಿಯಲ್ಲಿ ಮಾವು, ಬಾಳೆ ಬೆಳೆಗಾರರಿಗೆ ತೊಂದರೆ ಆಯಿತು. ಆಲಿಕಲ್ಲು ಮಳೆಗೆ ಬೆಳೆ ಹಾನಿಗೊಂಡಿತ್ತು. ಒಟ್ಟು 450 ಎಕರೆ ಬೆಳೆ ಹಾನಿ ಆಗಿದೆ. ಬಾಗಲಕೋಟೆಯಲ್ಲಿ 2400 ಎಕರೆ ತೋಟಗಾರಿಕೆ ಮಳೆ ಹಾನಿ ಉಂಟಾಗಿದೆ. ಚಿಕ್ಕಬಳ್ಳಾಪುರದಲ್ಲಿ 2.5 ರೂಪಾಯಿ ಮೌಲ್ಯದ ಬೆಳೆಹಾನಿ ಅಗಿದ್ದರೆ, ಬೆಳಗಾವಿಯಲ್ಲಿ 150 ಎಕರೆ ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆಗಳು ಬಿರುಗಾಳಿ ಮಳೆಗೆ ನೆಲಕಚ್ಚಿವೆ. ಯಾದಗಿರಿ ಸೇರಿ ಬೇರೆ ಬೇರೆ ಜಿಲ್ಲೆಗಳಲ್ಲಿ ಜೋಳ, ಭತ್ತದ ಬೆಳೆಗಳು ಅಕಾಲಿಕ ಮಳೆಗೆ ಸಿಲುಕಿ ಇಳುವರಿ ಕಳೆದುಕೊಂಡಿವೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

52 mins ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

1 hour ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

3 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

21 hours ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

22 hours ago