ರಾಜ್ಯ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗಲು ಸುಧಾಮೂರ್ತಿ ದಂಪತಿ ನಿರಾಕರಣೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಲು ಇನ್ಫೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಹಾಗೂ ಸುಧಾ ಮೂರ್ತಿ ನಿರಾಕರಿಸಿದ್ದಾರೆ.

ನಾವು ಹಿಂದುಳಿದ ವರ್ಗದ ಯಾವ ಜಾತಿಗೂ ಸೇರುವವರಲ್ಲ. ಆದ್ದರಿಂದ ಈ ಸಮೀಕ್ಷೆಯಿಂದ ಸರ್ಕಾರಕ್ಕೆ ಏನೂ ಉಪಯೋಗವಿಲ್ಲ. ಆದ್ದರಿಂದ ನಾವು ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಸ್ವಯಂ ದೃಢೀಕರಣ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಅಕ್ಟೋಬರ್.10ರಂದು ಸುಧಾಮೂರ್ತಿ ದಂಪತಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸ್ವಯಂ ದೃಢೀಕರಣ ಪತ್ರ ಬರೆದಿದ್ದಾರೆ.

ಇದನ್ನು ಓದಿ: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಶೇ.77.86 ಪ್ರಗತಿ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಯುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ನನ್ನ ಕೆಲವು ವೈಯಕ್ತಿಕ ಕಾರಣಗಳಿಂದ ಮಾಹಿತಿ ನೀಡಲು ನಿರಾಕರಿಸುತ್ತೇವೆ. ನಾನು ಮತ್ತು ನನ್ನ ಕುಟುಂಬ ಈ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಮತ್ತು ನಮ್ಮ ಮಾಹಿತಿಯನ್ನು ನೀಡಲು ನಿರಾಕರಿಸಿದ್ದೇನೆ ಎಂದು ದಂಪತಿ ತಿಳಿಸಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಅವರ ನಿವಾಸವಿದ್ದು, ಇಬ್ಬರೂ ಕರ್ನಾಟಕದ ನಿವಾಸಿಗಳಾಗಿದ್ದಾರೆ. ಕರ್ನಾಟಕ ಹೈಕೋರ್ಟ್ ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಮತ್ತು ಗಣತಿದಾರರು ಸಾರ್ವಜನಿಕರಿಂದ ಉತ್ತರಗಳನ್ನು ಒತ್ತಾಯಿಸುವಂತಿಲ್ಲ ಎಂದು ತೀರ್ಪು ನೀಡಿರುವುದರಿಂದ ದಂಪತಿಗಳು ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ.

ಜಯನಗರ 4ನೇ ಟಿ ಬ್ಲಾಕ್‍ನಲ್ಲಿರುವ ತಮ ನಿವಾಸದಲ್ಲಿ ಸಮೀಕ್ಷೆಗೆ ಹೋದ ಗಣತಿದಾರರಿಗೆ ಅವರು ಯಾವುದೇ ಹಿಂದುಳಿದ ಜಾತಿಗೆ ಸೇರಿದವರಲ್ಲ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸಲು ಬಯಸುವುದಿಲ್ಲ ಎಂದು ಹೇಳಿರುವುದಾಗಿ ವರದಿಯಾಗಿದೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

3 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

3 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

4 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

4 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

4 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

4 hours ago