ರಾಜ್ಯ

ನಂದಿನ ರಾಯಭಾರಿಯಾಗಿ ಸುಧಾರಾಣಿ

ಬೆಂಗಳೂರು : ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ನಂದಿನಿ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.

ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ನೂತನ ಪ್ರಚಾರದ ರಾಯಭಾರಿಯನ್ನಾಗಿ ನೇಮಿಸಲಾದ ಬಗ್ಗೆ ಅಧಿಕೃತವಾಗಿ ಘೋಷಿಸಿದೆ.

ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿ.ಕೆ.ಸುರೇಶ್ ಅವರು ಬರೆದುಕೊಂಡಿದ್ದಾರೆ.

ನಂದಿನಿ ಬ್ರ್ಯಾಂಡ್‌ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ. ಡಾ. ರಾಜ್‌ಕುಮಾರ್, ಶಿವರಾಜ್‌ಕುಮಾರ್ ಹಾಗೂ ಪುನೀತ್ ರಾಜ್‌ಕುಮಾರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕೇವಲ ಅನುಕರಣೆಯಲ್ಲ ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ ಎಂದು ಸುಧಾರಾಣಿ ತಿಳಿಸಿದ್ದಾರೆ.

ನಮ್ಮ ದೇಸಿ ಹಸುಗಳನ್ನ ಸಂರಕ್ಷಿಸುವುದು, ರೈತರಿಗೆ ನ್ಯಾಯಸಮ್ಮತ ಬೆಲೆ ಖಚಿತಪಡಿಸುವುದು ಹಾಗೂ ಗ್ರಾಹಕರಿಗೆ ಗುಣಮಟ್ಟದ, ವಿಶ್ವಾಸಾರ್ಹ ಉತ್ಪನ್ನಗಳನ್ನ ತಲುಪಿಸುವುದೇ ಇದರ ಮುಖ್ಯ ಉದ್ದೇಶವಾಗಿದೆ. ಈ ಹೊಸ ಅಧ್ಯಾಯದಲ್ಲಿ ದೇಸಿ ಹಸುಗಳಿಂದ ತಯಾರಿಸಿದ ತುಪ್ಪ, ಹಾಲು ಸೇರಿದಂತೆ ಹಲವು ಉತ್ಪನ್ನಗಳು ಸೇರಿದೆ. ಸಂಪ್ರದಾಯ, ಶುದ್ಧತೆ ಮತ್ತು ರೈತರ ಕಲ್ಯಾಣದ ಮೌಲ್ಯಗಳು ಅಡಕವಾಗಿರುವ, ರೈತರನ್ನ ಮನ್ನೆಲೆಗೆ ತರುವ, ನಮ್ಮ ಬೇರುಗಳನ್ನ ಗೌರವಿಸುವ ಮತ್ತು ಕರ್ನಾಟಕದ ಪರಂಪರೆಯನ್ನ ಮುಂದಿನ ಪೀಳಿಗೆಗಳಿಗೆ ಸಾಗಿಸುವ ಈ ಚಳವಳಿಗೆ ಬೆಂಬಲ ನೀಡಲು ನನಗೆ ಅಪಾರ ಹೆಮ್ಮೆಯಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹೊರ್ಮುಜ್ ಜಲಸಂಧಿ ಮುಕ್ತಗೊಳಿಸಲು 35 ರಾಷ್ಟ್ರಗಳ ಜೊತೆ ಸಭೆ : ಬ್ರಿಟನ್

ಲಂಡನ್‌ : ಇರಾನ್ ಸಂಘರ್ಷದಿಂದಾಗಿ ಪ್ರಪಂಚದ ತೈಲ ಸರಬರಾಜಿನಲ್ಲಿ ಉಂಟಾಗಿರುವ ತೀವ್ರ ಆರ್ಥಿಕ ಪರಿಣಾಮಗಳ ನಡುವೆ ಹೊರ್ಮುಜ್ ಜಲಸಂಧಿಯನ್ನು ಮುಕ್ತಗೊಳಿಸುವುದಕ್ಕಾಗಿ…

32 mins ago

ಲಿಂಗತ್ವ ಅಲ್ಪಸಂಖ್ಯಾತರ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ : ಹೋರಾಟಗಾರರು ಮತ್ತು ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಲಿಂಗತ್ವ ಅಲ್ಪಸಂಖ್ಯಾತರ (ಟ್ರಾನ್ಸ್‌ಜೆಂಡರ್) ಹಕ್ಕುಗಳ ರಕ್ಷಣೆ ಕುರಿತ-2019ರ…

1 hour ago

ಕೃಷಿ ಸಚಿವರ ಕಛೇರಿಯಲ್ಲಿ ಈ ವರ್ಷವೂ ಶೇ.100ರಷ್ಟು ಕಡತ ವಿಲೇವಾರಿ ಸಾಧನೆ

ಬೆಂಗಳೂರು : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಕಚೇರಿಯೂ ಸಾರ್ವಜನಿಕ ಸ್ನೇಹಿ ಆಡಳಿತವನ್ನು ಅಳವಡಿಸಿಕೊಂಡ ಹಿನ್ನಲೆ ಈ ವರ್ಷವೂ ಕಡತ…

2 hours ago

ಜನಗಣತಿ | ಲಿವ್‌-ಇನ್‌ ಸಂಬಂಧದಲ್ಲಿರುವವರ ಪರಿಗಣನೆ ಹೇಗೆ? ಕೇಂದ್ರ ಸರ್ಕಾರ ಹೇಳಿದ್ದೇನು?

ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ…

2 hours ago

ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ

ತುಮಕೂರು: ಶಿವೈಕ್ಯ ಡಾ.ಶಿವಕುಮಾರ ಶ್ರೀಗಳ 119ನೇ ಜನ್ಮದಿನೋತ್ಸವದ ಅಂಗವಾಗಿ ಇಂದು ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು.…

4 hours ago

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಇಂದು ಚುನಾವಣಾ ಪ್ರಚಾರದ…

4 hours ago