ಬೆಳಗಾವಿ: ಕಬ್ಬು ಬೆಳೆಗಾರರಿಗೆ ಪ್ರಸ್ತುತ ಹಂಗಾಮಿಗೆ ಪ್ರತಿ ಟನ್‌ಗೆ 3500 ರೂ ದರ ನೀಡುವಂತೆ ಒತ್ತಾಯಿಸಿ ಸಕ್ಕರೆ ಕಾರ್ಖಾನೆ ಹಾಗೂ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.
ಪ್ರಮುಖ ರಸ್ತೆಗಳನ್ನು ತಡೆಗಟ್ಟಿ ಹೋರಾಟ ನಡೆಸುತ್ತಿರುವ ರೈತರು, ಅಥಣಿ, ಗೋಕಾಕ್, ವಿಜಯಪುರ, ಚಿಕ್ಕೋಡಿ, ಮುಧೋಳ ರಾಜ್ಯ ಹೆದ್ದಾರಿ ಜೊತೆಗೆ ಅಥಣಿ ಹಾಗೂ ಹುಕ್ಕೇರಿ ಪಟ್ಟಣವನ್ನು ಸಂಪೂರ್ಣ ಬಂದ್ ಮಾಡಿ ವ್ಯಾಪಾರಸ್ಥರು ಕೂಡ ರೈತರ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ.
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತರು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.





