ಬೆಂಗಳೂರು : ರಾಜ್ಯದ ಕಬ್ಬು ಬೆಳೆಗಾರರ ಸಮಸ್ಯೆಯನ್ನು ಪರಿಹರಿಸುವ ಸಂಬಂಧ ಮಾತುಕತೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರ ಭೇಟಿಗೆ ಸಮಯಾವಕಾಶ ಕೋರಿದ್ದಾರೆ.
ಪ್ರಸ್ತುತ ರಾಜ್ಯದ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು ಅವರಿಗೆ ಮದ್ಯಾಂತರ ಪರಿಹಾರ ಸೇರಿದಂತೆ ಕೆಲವು ಮಹತ್ವದ ವಿಷಯಗಳ ಬಗ್ಗೆ ಚರ್ಚಿಸಲು ಸಮಯ ನೀಡುವಂತೆ ಪಿಎಂ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಪತ್ರ ಬರೆಯಲಿದ್ದಾರೆ.
ಇದನ್ನು ಓದಿ: ನ.11ಕ್ಕೆ ಆರ್.ಎಸ್.ಎಸ್ ವಿರುದ್ಧ ʼದಸಂಸ ಪ್ರತಿರೋಧ ಸಮಾವೇಶʼ
ಸುದ್ದಿಗೋಷ್ಠಿಯಲ್ಲಿ ಸ್ವತಃ ಈ ವಿಷಯವನ್ನು ಅವರೇ ತಿಳಿಸಿದ್ದು, ಕಬ್ಬು ಬೆಳೆಗಾರರ ವಿಚಾರದಲ್ಲಿ ಉದ್ಭವಿಸಿರುವ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ. ಆದ್ದರಿಂದ ತುರ್ತಾಗಿ ಭೇಟಿಗೆ ಅವಕಾಶ ನೀಡಬೇಕೆಂದು ಪತ್ರ ಬರೆಯಲು ಹಾಗೂ ಪ್ರಧಾನ ಮಂತ್ರಿಗಳ ಕಛೇರಿಯನ್ನು ಸಂಪರ್ಕಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ಕೂಡಲೇ ಕೇಂದ್ರ ಸರ್ಕಾರವು ಮಧ್ಯ ಪ್ರವೇಶ ಮಾಡಿ ಮುಖ್ಯವಾಗಿ ರಿಕವರಿ ಪ್ರಮಾಣವನ್ನು ಇಳಿಸುವುದು, ಎಫ.ಆರ್.ಪಿ. ದರ ಪರಿಷ್ಕರಿಸುವುದು, ಸಕ್ಕರೆ ರಫ್ತು, ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹರಿಸಲು ಒತ್ತಾಯಿಸುವಂತೆ ಚರ್ಚಿಸಲಾಯಿತು ಎಂದರು
ಕೇಂದ್ರ ಸರ್ಕಾರವು ರಾಜ್ಯದ ವಿಚಾರದಲ್ಲಿ ನಡೆಸುತ್ತಿರುವ ಮಲತಾಯಿ ಧೋರಣೆಯು ರೈತರ ಅನ್ನದ ತಟ್ಟೆಯವರೆಗೂ, ರೈತರ ಭೂಮಿಯವರೆಗೂ ಬಂದಿದೆ. ಈ ವಿಚಾರದಲ್ಲಿ ನಾವು ಅಧಿಕಾರಕ್ಕೆ ಬಂದಾಗಿನಿಂದ ಧ್ವನಿ ಎತ್ತುತ್ತಿದ್ದೇವೆ ಎಂದು ತಿಳಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…