ಬೆಂಗಳೂರು : ಕಬ್ಬು ಬೆಳೆಗಾರರ ಬೇಡಿಕೆ ಹಾಗೂ ಸಮಸ್ಯೆ ಪರಿಹಾರಕ್ಕೆ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಸಮಸ್ಯೆಗಳ ಮಹಾಪೂರವೇ ಕೇಳಿಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿಂದು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕಾಗಿ ಕರೆಯಲಾಗಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲಿಕರು ತಾವು ಎದುರಿಸುತ್ತಿರುವ ಹತ್ತು ಹಲವು ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ನಿರ್ಧಾರದಿಂದ ಆಗುತ್ತಿರುವ ತೊಂದರೆಗಳನ್ನು ತೋಡಿಕೊಂಡಿದ್ದಾರೆ.
ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಕರೆದಿದ್ದ ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಲಹೆ ನೀಡುವ ಬದಲು ತಾವು ಎದುರಿಸುತ್ತಿರುವ ಸಮಸ್ಯೆಗಳನ್ನೇ ಹೇಳಿದ್ದು, ಮುಖ್ಯಮಂತ್ರಿಗಳ ತಲೆಬಿಸಿಯನ್ನು ಮತ್ತಷ್ಟು ಹೆಚ್ಚಿಸಿದೆ. ಇದರಿಂದ ಅತ್ತ ಧರಿ ಇತ್ತು ಹುಲಿ ಎಂಬಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಇದನ್ನೂ ಓದ:-ಹೆದ್ದಾರಿ ತಡೆದು ಉರುಳು ಸೇವೆ ಮಾಡಿ ರೈತರ ಪ್ರತಿಭಟನೆ : ನಂಜನಗೂಡಿನಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್
ರೈತರ ಸಮಸ್ಯೆ ಪರಿಹರಿಸುವುದೋ ಅಥವಾ ಸಕ್ಕರೆ ಕಾರ್ಖಾನೆಗಳ ಮಾಲೀಕರ ತೊಂದರೆ ನಿವಾರಿಸುವುದೋ ಎಂಬ ಸಂದಿಗ್ಧ ಪರಿಸ್ಥಿತಿ ಎದುರಿಸುವಂತಾಗಿದೆ. ಕೆಳೆದ ಐದು ವರ್ಷದಿಂದ ಎಂಎಸ್‍ಪಿ ಹೆಚ್ಚಳ ಮಾಡಿಲ್ಲ, ನಾಲ್ಕು ವರ್ಷದಿಂದ ಎಥೆನಾಲ್ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿಲ್ಲ. ಇದರಿಂದ ನಮಗೆ ಸಮಸ್ಯೆ ಆಗಿದೆ ಎಂದು ಸಕ್ಕರೆ ಕಾರ್ಖಾನೆಗಳ ಮಾಲೀಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡಿದ್ದಾರೆ ಎನ್ನಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಎಂಎಸ್‍ಪಿ ಮತ್ತು ಎಥೆನಾಲ್ ದರ ಹೆಚ್ಚಿಸುವಂತೆ ನೀವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೀರಾ ಎಂದು ಪ್ರಶ್ನಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…
ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…
ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…
ನಾಸಿಕ್ : ಕರ್ನಾಟಕ-ಗೋವಾ ಗಡಿಯ ಚೋರ್ಲಾ ಘಾಟ್‌ನಲ್ಲಿ 2025ರ ಅಕ್ಟೋಬರ್‌ನಲ್ಲಿ ಸಂಚಲನ ಸೃಷ್ಟಿಸಿದ್ದ 400 ಕೋಟಿ ರೂಪಾಯಿ ದರೋಡೆ ಪ್ರಕರಣವೇ…
ಕೋಲಾರ : ಜಿಲ್ಲೆಯ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಭಾರತದ ಮೊದಲ ಖಾಸಗಿ ವಲಯದ ಹೆಲಿಕಾಪ್ಟರ್ ಫೈನಲ್ ಅಸೆಂಬ್ಲಿ ಲೈನ್ (FAL)…
ಮೈಸೂರು : ಕೃಷಿಯಲ್ಲಿ ಕೃತಕ ಬುದ್ಧಿಮತ್ತೆಯನ್ನು ಅಳವಡಿಕೊಳ್ಳುವ ಮೂಲಕ ಕೃಷಿಯನ್ನು ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ…