ರಾಜ್ಯ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ : ರಾಜ್ಯದ 18 ಸ್ಥಳಗಳಲ್ಲಿ ಎನ್ಐಎ ಶೋಧ

ಹೊಸದಿಲ್ಲಿ : ಸುಹಾಸ್ ಶೆಟ್ಟಿಯನ್ನು ಹತ್ಯೆ ಪ್ರಕರಣದಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಶನಿವಾರ ಕರ್ನಾಟಕದ ವಿವಿಧ ಜಿಲ್ಲೆಗಳ 18 ಸ್ಥಳಗಳಲ್ಲಿ ವ್ಯಾಪಕ ಶೋಧ ನಡೆಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎನ್‌ಐಎ, ಕಳೆದ ಮೇ ತಿಂಗಳಲ್ಲಿ ಮಂಗಳೂರು ನಗರದ ಬಜ್ಪೆ ಪ್ರದೇಶದಲ್ಲಿ ಬಜರಂಗದಳ ಸದಸ್ಯ ಸುಹಾಸ್ ಶೆಟ್ಟಿ ಅವರನ್ನು ಆರೋಪಿ ಅಬ್ದುಲ್ ಸಫ್ವಾನ್ ಮತ್ತು ಇತರರು ಮಾರಕ ಆಯುಧಗಳನ್ನು ಬಳಸಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕ್ರೂರವಾಗಿ ಹತ್ಯೆ ಮಾಡಿದ್ದರು. ಈ ಹತ್ಯೆಯು ಸಮಾಜದಲ್ಲಿ ಭಯೋತ್ಪಾದನೆಯನ್ನು ಹರಡುವ ಉದ್ದೇಶವನ್ನು ಹೊಂದಿತ್ತು ಎಂದು ವಿವರಿಸಿದೆ.

ಜೂನ್‌ನಲ್ಲಿ ಸ್ಥಳೀಯ ಪೊಲೀಸರಿಂದ ಪ್ರಕರಣವನ್ನು ವಹಿಸಿಕೊಂಡ ಎನ್ಐಎ, ಪ್ರಕರಣದಲ್ಲಿ ಬಂಧಿತರಾದ 12 ವ್ಯಕ್ತಿಗಳು ಮತ್ತು ವಿವಿಧ ಶಂಕಿತರ ನಿವಾಸಗಳನ್ನು ಶೋಧಿಸಿದೆ.

ಮಂಗಳೂರು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ನಡೆಸಿದ ಶೋಧದಲ್ಲಿ 11 ಮೊಬೈಲ್ ಫೋನ್‌ಗಳು, 13 ಸಿಮ್ ಕಾರ್ಡ್‌ಗಳು ಮತ್ತು 8 ಮೆಮೊರಿ ಕಾರ್ಡ್‌ಗಳು ಮತ್ತು ಇತರ ಅಪರಾಧ ದಾಖಲೆಗಳು ಸೇರಿದಂತೆ ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದೆ.

ಹತ್ಯೆಯ ಹಿಂದಿನ ಪಿತೂರಿಯ ಬಗ್ಗೆ ತನಿಖೆ ಮುಂದುವರೆದಿದೆ ಎಂದು ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

2 hours ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

2 hours ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

2 hours ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

3 hours ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

14 hours ago