ಬೆಂಗಳೂರು : ರೌಡಿಶೀಟರ್ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಬಿಜೆಪಿ ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ರಾಷ್ಟ್ರೀಯ ತನಿಖಾ ದಳಕ್ಕೆ(ಎನ್‌ಐಎ) ಒಪ್ಪಿಸಿದೆ.
ಈ ಕುರಿತು ಎನ್‌ಐಎ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದೆ.
ರೌಡಿಶೀಟರ್ ಹಾಗೂ ಹಿಂದೂಪರ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಮೇ 1 ರಂದು ದುಷ್ಕರ್ಮಿಗಳ ತಂಡವು ಬಜಪೆಯ ಕಿನ್ನಿಪದವಿನಲ್ಲಿ ತಲವಾರಿನಿಂದ ಕೊಚ್ಚಿ ಹತ್ಯೆ ಮಾಡಿತ್ತು.
ಹತ್ಯೆಯಾದ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು.





