ಹಾಸನ: ಹಾಸನದಲ್ಲಿ ಕೆಲವು ಬಿಜೆಪಿಗರು ನಮಗೆ ಬೆಂಬಲ ಘೋಷಿಸದೇ ಇರುವುದು ನಿಜ. ಹಾಗೆಯೇ ಮಂಡ್ಯದಲ್ಲಿ ಸುಮಲತಾ ಅಂಬರೀಶ್ ಎಚ್‌ಡಿ ಕುಮಾರಸ್ವಾಮಿಗೆ ಸಹಾಯ ಮಾಡಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರು ಹೇಳಿದ್ದಾರೆ. ಆ ಮೂಲಕ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ದೊಡ್ಡಗೌಡ್ರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಮಂಡ್ಯ ಕ್ಷೇತ್ರದಲ್ಲಿ ಕುಮಾರಸ್ವಾಮಿಗೆ ಬಿಜೆಪಿಯ ಸುಮಲತಾ ಅಂಬರೀಶ್ ಅವರು ಸಹಾಯ ಮಾಡಿಲ್ಲ. ಹಾಗಂತ ಕುಮಾರಸ್ವಾಮಿಗೆ ಬಹಳ ಅಪಾಯವಾಗಲಿದೆ ಎಂದು ಅರ್ಥವಲ್ಲ. ಆದರೂ ಸಹಾ ಹಾಸನ ಮತ್ತು ಮಂಡ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಲಿದ್ದಾರೆ ಎಂದು ದೇವೇಗೌಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಂಪತ್ತಿನ ಸರ್ವೆ ಹಾಗೂ ಹಂಚಿಕೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆ ಕುರಿತು, ಈ ಬಗ್ಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ. ಹೇಗಾದರೂ ಮಾಡಿ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯಬೇಕೆಂದು ಹೇಳಿಕೆ ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಕಾವೇರಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ಭಾಗದ ಎಲ್ಲಾ ಕಡೆಗಳಲ್ಲಿಯೂ ನಾನು ಪ್ರಚಾರ ಮಾಡಿದ್ದೇನೆ. ಕಾವೇರಿ ಹೋರಾಟ ನಮ್ಮ ಜೀವನ್ಮರಣದ ಹೋರಾಟವಾಗಿದೆ. ಇದಕ್ಕಾಗಿ ನಾವು ಈ ಬಾರಿ 28ಕ್ಕೆ 28 ಕ್ಷೇತ್ರಗಳನ್ನು ಗೆದ್ದು, ಮೋದಿ ಅವರನ್ನು ಪ್ರಧಾಯನ್ನಾಗಿ ಮಾಡಬೇಕು. ಮತ್ತು ಈ ಬಾರಿ ಬಿಜೆಪಿ ತಮಿಳುನಾಡಿನಲ್ಲಿ ಖಾತೆ ತೆರೆಯಲಿದೆ ಎಂದು ಎಚ್‌ಡಿಕೆ ತಿಳಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…