ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿಯಾದ ಬೆನ್ನಲ್ಲಿಯೇ ಇಂದು (ಮಾ.೧೭) ಸಂಸದೆ ಸುಮಲತಾ ಅಂಬರೀಶ್ ಅವರು ಹೈಕಮಾಂಡ್ ಆದೇಶದಂತೆ ದೆಹಲಿಗೆ ತೆರಳಿದ್ದಾರೆ.
ಜೆಡಿಎಸ್‌ಗೆ ಟಕೆಟ್ ಸಿಗುವ ವಿಶ್ವಾಸದಲ್ಲಿರುವ ಮಾಜಿ ಸಿಎಂ ಎಚ್‌ಡಿಕೆ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇತ್ತ ಬಿಜೆಪಿಯಿಂದ ಸಂಸದೆ ಸುಮಲತಾ ಅವರನ್ನು ವರಿಷ್ಠರು ದೆಹಲಿಗೆ ಆಹ್ವಾನಿಸಿದ್ದಾರೆ
ಕೂಡಲೇ ದೆಹಲಿಗೆ ಬರಬೇಕೆಂದು ಹೈಕಮಾಂಡ್ ಸೂಚನೆ ನೀಡಿದ ಬೆನ್ನಲ್ಲಿಯೇ ಇಂದು ಮಧ್ಯಾಹ್ನವೇ ಸುಮಲತಾ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
ಒಂದು ವೇಳೆ ಮಂಡ್ಯ ಟಿಕೆಟ್ ಕೈ ತಪ್ಪಿದ್ರೆ ಸುಮಲತಾ ನಡೆಯೇನು..?, ತಾವು ಮೊದಲೇ ಹೇಳಿದಂತೆ ಬಿಜೆಪಿಯಿಂದ ಟಿಕೆಟ್ ಸಿಗದೇ ಹೋದರೇ ಪಕ್ಷೇತರರಾಗಿ ಸ್ಪರ್ಧೆ ಮಾಡಲಿದ್ದಾರೆಯೇ ಎಂಬುದನ್ನು ಕಾದು ನೋಡಬೇಕಿದೆ. ಒಟ್ಟಿನಲ್ಲಿ ಸುಮಲತಾ ಅವರ ಮುಂದಿನ ನಡೆ ಬಗ್ಗೆ ತೀವ್ರ ಕುತೂಹಲ ಮೂಡಿದೆ.





