ಹುಬ್ಬಳ್ಳಿ: ಮಂಡ್ಯ ಸಂಸದೆ ಸುಮಲತಾ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಜೆಡಿಎಸ್ ಕೋರ್ ಕಮಿಟಿಯ ರಾಜ್ಯಾಧ್ಯಕ್ಷ ಜಿಟಿ ದೇವೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಜಿಟಿ ದೇವೇಗೌಡ, ಮುಂದೆ ನಡೆಯಲಿರುವ ಲೋಕಸಭಾ ಚುನಾವಣೆಗೆ ಸುಮಲತಾ ಅವರು ಬಿಜೆಪಿಯಿಂದ ಸ್ಪರ್ಧೆ ಮಾಡಿದರೆ ನಾವು ಬೆಂಬಲ ನೀಡುತ್ತೇವೆ. ಆದರೆ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸುಮಲತಾ ಕಾಂಗ್ರೆಸ್ ಸೇರಿದರೆ ನಾವು ಬೆಂಬಲ ನೀಡಲ್ಲ. ಸುಮಲತಾ ಪರವಾಗಿ ಟಿಕೆಟ್ ಕೇಳಿದ್ದ ನಾರಾಯಣಗೌಡ ಈಗ ಸಿಎಂ ಸಿದ್ದರಾಮಯ್ಯ ಅವರ ಮನೆಯಲ್ಲಿ ಕೂತಿದ್ದಾರೆ. ಹೀಗಾಗಿ ಸುಮಲತಾ ಕೂಡಾ ಕಾಂಗ್ರೆಸ್‌ಗೆ ಹೋಗುವ ಸಾಧ್ಯತೆಯಿದೆ ಎಂದು ತಿಳಿಸಿದರು.