ಮಂಡ್ಯ: ಬೆಂಗಳೂರಿನ ಬೈಪ್ಪನಹಳ್ಳಿ ಪೊಲೀಸರು ಮೈಸೂರಿನ ನಡೆಸುತ್ತಿದ್ದ ಭ್ರೂಣ ಹತ್ಯೆ ಜಾಲವನ್ನು ಪತ್ತೆ ಹಚ್ಚಿ ಕೃತ್ಯವೆಸೆಗುತ್ತಿದ್ದ ಗುಂಪನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಈ ಕೃತ್ಯವನ್ನು ಇಡೀ ರಾಜ್ಯವೇ ಖಂಡಿಸಿತ್ತು. ಇದೀಗ ಮಂಡ್ಯಾ ಜಿಲ್ಲೆಯ ಸಂಸದೆ ಸುಮಲತಾ ಅಂಬರೀಶ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಕಂಡನೆ ವ್ಯಕ್ತಪಡಿಸಿದ್ದಾರೆ.
ತಮ್ಮ ಫೇಸ್‌ಬುಕ್ ಕಾತೆ ಮೂಲಕ ಖಂಡನೆ ವ್ಯಕ್ತಪಡಿಸಿರುವ ಸುಮಲತ ಅವರು, ಮಂಡ್ಯದ ಹುಳ್ಳೇನಹಳ್ಳಿ ಸಮೀಪದ ಆಲೆಮನೆಯಲ್ಲಿ ನಡೆದ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಜಾಲದ ಪ್ರಕರಣ ತೀವ್ರ ಆಘಾತ ಮೂಡಿಸಿದೆ. ಸಮಾಜದಲ್ಲಿ ಲಿಂಗ ಅನುಪಾತ ಕುಸಿಯುತ್ತಿದ್ದು, ಮಹಿಳೆಯರ ಸಂಖ್ಯೆ ಗಣನೀಯ ಇಳಿಕೆ ಕಾಣುತ್ತಿದೆ. ಪರಿಣಾಮ ರೈತರೂ ಸೇರಿದಂತೆ ಶ್ರಮಿಕ ವರ್ಗಕ್ಕೆ ಮದುವೆಯಾಗಲು ಹೆಣ್ಣಿನ ಕೊರತೆಯಂತಹ ಗಂಭೀರ ಸಮಸ್ಯೆಯೂ ತಲೆದೂರಿದೆ.
ದಿಶಾ ಸಭೆಯಲ್ಲಿ ಈ ಕುರಿತಂತೆ ಚರ್ಚೆ ಮಾಡಿದ್ದರೂ, ಇಂಥದ್ದೊಂದು ಘಟನೆ ನಡೆದಿರುವುದು ಅತ್ಯಂತ ನೋವಿನ ಸಂಗತಿ. ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆಯಂತಹ ಪ್ರಕರಣಗಳ ಗಂಭೀರತೆಯ ಕುರಿತಂತೆ ಅರಿವು ಮೂಡಿಸಬೇಕಾದವರೆ, ಹೀನ ಕೃತ್ಯಯಲ್ಲಿ ಭಾಗಿಯಾಗಿದ್ದು ಮತ್ತಷ್ಟು ಆತಂಕ ತಂದಿದೆ. ಈ ಪ್ರಕರಣದ ಹಿಂದಿರುವ ಪ್ರತಿಯೊಬ್ಬರಿಗೂ ಕಠಿಣ ಶಿಕ್ಷೆಯಾಗಬೇಕೆಂದು ಆಗ್ರಹಿಸುವೆ ಎಂದಿದ್ದಾರೆ.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…